ಲೋಕಸಭೆ ಚುನಾವಣೆ: ಯುಪಿಯಲ್ಲಿ 2019ರಲ್ಲಿ ಠೇವಣಿ ಕಳೆದುಕೊಂಡ ಕ್ಷೇತ್ರಗಳಲ್ಲೇ ಈ ಬಾರಿ ಕಾಂಗ್ರೆಸ್ ಸ್ಪರ್ಧೆ!

ಕೊನೆಗೂ ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟಿಗೆ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
Updated on

ಲಖನೌ: ವಾರಗಳ ಚೌಕಾಶಿ ಮತ್ತು ಸುದೀರ್ಘ ಮಾತುಕತೆಯ ನಂತರ ಕೊನೆಗೂ ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟಿಗೆ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ. ಇದು ತಳಮಟ್ಟದ ಕಾರ್ಯಕರ್ತರನ್ನು ಮತ್ತಷ್ಟು ಹುರಿದುಂಬಿಸಿದೆ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಶಕ್ತಿ ನೀಡಿದೆ.

ಅಖಿಲೇಶ್ ಯಾದವ್ ನೇತೃತ್ವದ ಪಕ್ಷ, ಕಾಂಗ್ರೆಸ್‌ಗೆ 17 ಮತ್ತು ಚಂದ್ರಶೇಖರ್ ಆಜಾದ್ ನೇತೃತ್ವದ ಆಜಾದ್ ಸಮಾಜ ಪಕ್ಷಕ್ಕೆ(ಎಎಸ್‌ಪಿ) ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದ್ದು, ಉಳಿದ 62 ಸ್ಥಾನಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

2024 ರ ಲೋಕಸಭೆ ಚುನಾವಣೆಗೆ ಮಾಡಿಕೊಳ್ಳಲಾದ ಈ ಮೈತ್ರಿಯು ಬಿಜೆಪಿಯ ಪ್ರಾಬಲ್ಯಕ್ಕೆ ಸವಾಲೆಸೆಯುವ ಸಾಧ್ಯತೆ ಇದೆ.

ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
63 ಸ್ಥಾನಗಳಲ್ಲಿ ಎಸ್ ಪಿ, 17 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ; ಉತ್ತರ ಪ್ರದೇಶದಲ್ಲಿ ಲೋಕಸಮರಕ್ಕೆ ನಾಂದಿ

ಚುನಾವಣಾ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ ಪಕ್ಷಕ್ಕೆ ಹಂಚಿಕೆಯಾದ 17 ಸ್ಥಾನಗಳ ಪೈಕಿ ಬಹುತೇಕ ಸ್ಥಾನಗಳಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಈ ಬಾರಿ ಸ್ಪರ್ಧಿಸುತ್ತಿರುವ 17 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಳೆದ ಬಾರಿ ಕಾಂಗ್ರೆಸ್ ಠೇವಣಿ ಉಳಿಸಿಕೊಳ್ಳಲು ವಿಫಲವಾಗಿದೆ. ಅಲ್ಲದೆ ಒಂದು ಕ್ಷೇತ್ರದಲ್ಲಿ, ಬನ್ಸ್‌ಗಾಂವ್ ನಲ್ಲಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ವಿಫಲವಾಗಿತ್ತು.

2019ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 67 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಸುಮಾರು 63 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ರಾಯ್ ಬರೇಲಿಯಲ್ಲಿ ಪಕ್ಷಕ್ಕೆ ಏಕೈಕ ಗೆಲುವು ತಂದು ಕೊಟ್ಟಿದ್ದರು. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದರು.

2024 ರ ಚುನಾವಣೆಯಲ್ಲಿ, ರಾಯ್ ಬರೇಲಿ, ಅಮೇಥಿ, ಕಾನ್ಪುರ, ಫತೇಪುರ್ ಸಿಕ್ರಿ, ಬನ್ಸ್‌ಗಾಂವ್, ಸಹರಾನ್‌ಪುರ, ಪ್ರಯಾಗ್‌ರಾಜ್, ಮಹಾರಾಜ್‌ಗಂಡ್ಜ್, ವಾರಣಾಸಿ, ಅಮ್ರೋಹಾ, ಝಾನ್ಸಿ, ಬುಲಂದ್‌ಶಹರ್, ಗಾಜಿಯಾಬಾದ್, ಮಥುರಾ, ಸೀತಾಪುರ್, ಬಾರಾಬಂಕಿ ಮತ್ತು ದೇವರಿಯಾ ಸೇರಿದಂತೆ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ.

ಕಾಂಗ್ರೆಸ್ ಗೆ ಹಂಚಿಕೆಯಾದ 17 ಸ್ಥಾನಗಳ ಪೈಕಿ ವಾರಣಾಸಿಯು ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವೂ ಇದೆ.

2019 ರಲ್ಲಿ, ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 80 ರಲ್ಲಿ 64 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ(ಆರ್‌ಎಲ್‌ಡಿ) ನೊಂದಿಗೆ ಮೈತ್ರಿ ಮಾಡಿಕೊಂಡು 15 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ರಾಯ್ ಬರೇಲಿಯನ್ನು ಮಾತ್ರ ಉಳಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com