ಅಸ್ಸಾಂ: ಮುಸ್ಲಿಂ ವಿವಾಹ ಕಾಯ್ದೆ ರದ್ದು, ಶೀಘ್ರವೇ ಯುಸಿಸಿ ಜಾರಿ!

ಅಸ್ಸಾಂ ಸರ್ಕಾರ ಮುಸ್ಲಿಂ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದ್ದು, ಶೀಘ್ರವೇ ಸಮಾನ ನಗಾರಿಕ ಸಂಹಿತೆ (ಯುಸಿಸಿ) ಜಾರಿಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮPTI

ಗುವಾಹಟಿ: ಅಸ್ಸಾಂ ಸರ್ಕಾರ ಮುಸ್ಲಿಂ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದ್ದು, ಶೀಘ್ರವೇ ಸಮಾನ ನಗಾರಿಕ ಸಂಹಿತೆ (ಯುಸಿಸಿ) ಜಾರಿಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಸ್ಲಿಂ ವಿವಾಹ ಹಾಗೂ ವಿಚ್ಛೇದನ ನೋಂದಣಿ ಕಾಯ್ದೆ, 1935 ನ್ನು ರದ್ದುಗೊಳಿಸಲಾಗಿದೆ.

"ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಗಾಗಲೇ ನಾವು ಯುಸಿಸಿಯತ್ತ ಗಮನ ಹರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಹಾಗಾಗಿ ಇಂದು ನಾವು ಬಹಳ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇವೆ. ಅಸ್ಸಾಂ ಮುಸ್ಲಿಂ ಮದುವೆ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ಕ್ಯಾಬಿನೆಟ್ ರದ್ದುಗೊಳಿಸಿದೆ, ”ಬರುವಾ ಹೇಳಿದರು.

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
Uniform Civil Code: ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ!

“ಈ ಕಾಯ್ದೆಯಡಿ ಈಗ ಮುಸ್ಲಿಂ ವಿವಾಹ ಮತ್ತು ವಿಚ್ಛೇದನದ ನೋಂದಣಿ ಇರುವುದಿಲ್ಲ. ನಾವು ವಿಶೇಷ ವಿವಾಹ ಕಾಯ್ದೆಯನ್ನು ಹೊಂದಿದ್ದೇವೆ ಮತ್ತು ಎಲ್ಲಾ ವಿವಾಹಗಳನ್ನು ಅದರ ಅಡಿಯಲ್ಲಿ ನೋಂದಾಯಿಸಬೇಕೆಂದು ನಾವು ಬಯಸುತ್ತೇವೆ, ”ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸಂಪುಟ ಸಭೆಯ ನಂತರ ಸಚಿವ ಮತ್ತು ಸರ್ಕಾರದ ವಕ್ತಾರ ಜಯಂತ ಮಲ್ಲ ಬರುವಾ ಅವರು ಪತ್ರಕರ್ತರಿಗೆ ತಿಳಿಸಿದರು, ರಾಜ್ಯವು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಳವಡಿಸಿಕೊಳ್ಳುತ್ತಿರುವ ಕಾರಣ ಕಾಯಿದೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com