ರೈತರ 'ದಿಲ್ಲಿ ಚಲೋ' ಹೋರಾಟ ಫೆ.29ರವರೆಗೆ ಸ್ಥಗಿತ: ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ

ತಮ್ಮ ದಿಲ್ಲಿ ಚಲೋ ಮೆರವಣಿಗೆಯನ್ನು ಸ್ಥಗಿತಗೊಳಿಸಿದ ಎರಡು ದಿನಗಳ ನಂತರ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (KMM) ಶುಕ್ರವಾರ ತಮ್ಮ ಹೋರಾಟದ ಮುಂದಿನ ನಿರ್ಧಾರವನ್ನು ಫೆಬ್ರವರಿ 29 ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಪಟಿಯಾಲ ಜಿಲ್ಲೆಯ ಶಂಭು ಗಡಿಯಲ್ಲಿ ಶುಕ್ರವಾರ ನಡೆದ ‘ಕಪ್ಪು ದಿನ’ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿರಿಯ ರೈತ
ಪಟಿಯಾಲ ಜಿಲ್ಲೆಯ ಶಂಭು ಗಡಿಯಲ್ಲಿ ಶುಕ್ರವಾರ ನಡೆದ ‘ಕಪ್ಪು ದಿನ’ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿರಿಯ ರೈತ

ಚಂಡೀಗಢ: ತಮ್ಮ ದಿಲ್ಲಿ ಚಲೋ ಮೆರವಣಿಗೆಯನ್ನು ಸ್ಥಗಿತಗೊಳಿಸಿದ ಎರಡು ದಿನಗಳ ನಂತರ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (KMM) ಶುಕ್ರವಾರ ತಮ್ಮ ಹೋರಾಟದ ಮುಂದಿನ ನಿರ್ಧಾರವನ್ನು ಫೆಬ್ರವರಿ 29 ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಇಂದು ಶನಿವಾರ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಅಂತಾರಾಜ್ಯ ಗಡಿಗಳಲ್ಲಿ ಮೋಂಬತ್ತಿ ಬೆಳಕು ಮೆರವಣಿಗೆ ನಡೆಸಲಿದ್ದಾರೆ.

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್, ನಾಳೆ ಭಾನುವಾರ ವಿಶ್ವ ವ್ಯಾಪಾರ ಸಂಘಟನೆ ಕುರಿತು ವಿಚಾರ ಸಂಕಿರಣಗಳು ನಡೆಯಲಿದ್ದು, ಇದರಲ್ಲಿ ಅನೇಕ ಸಮಾಜಪರ ಮತ್ತು ರೈತಪರ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸೋಮವಾರ ದೊಡ್ಡ ಕಾರ್ಪೊರೇಟ್‌ಗಳು ಮತ್ತು ಬಿಜೆಪಿ ನಾಯಕರ ಪ್ರತಿಕೃತಿ ದಹಿಸಲಾಗುವುದು. ಮರುದಿನ, ಎಸ್ ಕೆಎಂ(ರಾಜಕೀಯೇತರ) ಮತ್ತು ಕೆಎಂಎಂ ಮ್ಮದೇ ಆದ ಸಭೆಗಳನ್ನು ನಡೆಸುತ್ತವೆ. ಬುಧವಾರ ಜಂಟಿ ಸಭೆ ನಡೆಸಿ ಮುಂದಿನ ಕ್ರಿಯಾಯೋಜನೆಯನ್ನು ಗುರುವಾರ ಪ್ರಕಟಿಸಲಾಗುವುದು. ಅಲ್ಲಿಯವರೆಗೆ ನಾವು ನಮ್ಮ ಹೋರಾಟವನ್ನು ಸ್ಥಗಿತಗೊಳಿಸುತ್ತೇವೆ ಎಂದರು.

ಪಟಿಯಾಲ ಜಿಲ್ಲೆಯ ಶಂಭು ಗಡಿಯಲ್ಲಿ ಶುಕ್ರವಾರ ನಡೆದ ‘ಕಪ್ಪು ದಿನ’ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿರಿಯ ರೈತ
ಪ್ರತಿಭಟನಾನಿರತ ರೈತರ ವಿರುದ್ಧ ಹೊಸ ಅಸ್ತ್ರ ಪ್ರಯೋಗಕ್ಕೆ ಪೊಲೀಸರು ಮುಂದು; ಖಟ್ಟರ್ ಸರ್ಕಾರ ಯು-ಟರ್ನ್

ಹರಿಯಾಣದಲ್ಲಿ, ರೈತ ಮುಖಂಡರ ವಿರುದ್ಧದ ತಮ್ಮ ನಿಲುವಿನಲ್ಲಿ ಪೊಲೀಸರು ಮೃದು ಧೋರಣೆಗೆ ಬಂದಿದ್ದಾರೆ, ಅವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ನ್ನು ಅನ್ವಯಿಸುವ ಪ್ರಸ್ತಾಪವನ್ನು ಕೈಬಿಟ್ಟಿರುವುದಾಗಿ ಹೇಳಿದರು. ಆದರೆ ಇತರ ಪ್ರತಿಭಟನಾಕಾರರನ್ನು ಸೇರಲು ಖಾನೌರಿ ಅಂತಾರಾಜ್ಯ ಗಡಿಗೆ ಹೋಗಲು ಬಯಸಿದ ರೈತರನ್ನು ಚದುರಿಸಲು ಹಿಸಾರ್‌ನಲ್ಲಿ ಅಶ್ರುವಾಯು ಬಳಸಿತು.

ಪಂಜಾಬ್‌ನಲ್ಲಿ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪ್ರತಿಭಟನೆಯ ಸಮಯದಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಸಹೋದರಿಗೆ `1 ಕೋಟಿ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದಾರೆ. ಆದರೆ ಅವರ ಕುಟುಂಬವು ಅದನ್ನು ತಿರಸ್ಕರಿಸಿತು ಬದಲಿಗೆ ನ್ಯಾಯ ಬೇಕು ಎಂದು ಕೇಳಿದರು. ಶುಭಕರನ್‌ನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವವರೆಗೆ ಆತನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

ಎಸ್ ಕೆಎಂನ ಭಾಗವಾಗಿರುವ ಭಾರ್ತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್), ಸಿಂಗ್ ಅವರ ಸಾವಿನ ವಿರುದ್ಧ ಪ್ರತಿಭಟಿಸಿ ಪಂಜಾಬ್‌ನ 47 ಸ್ಥಳಗಳಲ್ಲಿ ಪ್ರದರ್ಶನಗಳನ್ನು ನಡೆಸಲಾಗಿದೆ.

ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ: ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ 'ದೆಹಲಿ ಚಲೋ' ಆಂದೋಲನದ ಭಾಗವಾಗಿದ್ದ 62 ವರ್ಷದ ಮತ್ತೊಬ್ಬ ರೈತರು ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದರ್ಶನ್ ಸಿಂಗ್ ಅವರು ಬಟಿಂಡಾ ಜಿಲ್ಲೆಯ ಅಮರ್‌ಗಢ ಗ್ರಾಮದವರು ಎಂದು ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಇದೇ ಆಂದೋಲನದ ಭಾಗವಾಗಿದ್ದ 72 ವರ್ಷದ ರೈತ ಈ ಹಿಂದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು. ಶಂಭು ಗಡಿಯಲ್ಲಿ 63 ವರ್ಷದ ಮತ್ತೊಬ್ಬ ರೈತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೊನ್ನೆ ಬುಧವಾರ, ಹರಿಯಾಣ ಪೊಲೀಸರು ಮತ್ತು ಪಂಜಾಬ್ ರೈತರ ನಡುವಿನ ಘರ್ಷಣೆಯಲ್ಲಿ ಬಟಿಂಡಾ ಮೂಲದ 21 ವರ್ಷದ ಶುಭಕರನ್ ಸಾವಿಗೀಡಾಗಿದ್ದರು. ಈ ಮೂಲಕ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com