ಗಾಯಗೊಂಡ ರೈತನನ್ನು ನಮಗೆ ಹಸ್ತಾಂತರಿಸಿ: ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಪತ್ರ

ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಶನಿವಾರ ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಪ್ರತಿಭಟನಾನಿರತ ರೈತರು
ಪ್ರತಿಭಟನಾನಿರತ ರೈತರು

ಚಂಡೀಗಢ: ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಶನಿವಾರ ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯ ವೇಳೆ ನಡೆದ ಘರ್ಷಣೆಯಲ್ಲಿ ಗಾಯಗೊಂಡು ಪಿಜಿಐ ರೋಹ್ಟಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ತಮಗೆ ಹಸ್ತಾಂತರಿಸಬೇಕೆಂದು ಕೇಳಿಕೊಂಡಿದ್ದಾರೆ.

ಹರಿಯಾಣದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂಜಾಬ್‌ನ ಯಾವುದೇ ರೈತರನ್ನೂ ರಾಜ್ಯದ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ವರ್ಮಾ ಹೇಳಿದ್ದಾರೆ.

ಫೆಬ್ರವರಿ 21 ರಂದು ಹರಿಯಾಣದ ಭದ್ರತಾ ಸಿಬ್ಬಂದಿ ಕೆಲವು ರೈತರನ್ನು ಥಳಿಸಿ ಕರೆದೊಯ್ದಿದ್ದಾರೆ ಎಂದು 'ದೆಹಲಿ ಚಲೋ' ಪ್ರತಿಭಟನೆ ಮುನ್ನಡೆಸುತ್ತಿರುವ ರೈತ ಮುಖಂಡರು ಆರೋಪಿಸಿದ್ದಾರೆ.

ಪ್ರತಿಭಟನಾನಿರತ ರೈತರು
ರೈತರ 'ದಿಲ್ಲಿ ಚಲೋ' ಹೋರಾಟ ಫೆ.29ರವರೆಗೆ ಸ್ಥಗಿತ: ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಎರಡು ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ಖಾನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ನಾಲ್ವರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಹರಿಯಾಣದ ಮುಖ್ಯ ಕಾರ್ಯದರ್ಶಿ ಸಂಜೀವ್ ಕೌಶಲ್ ಅವರಿಗೆ ಬರೆದ ಪತ್ರದಲ್ಲಿ, ವರ್ಮಾ ಅವರು ಪಂಜಾಬ್ ಮೂಲದ ಪ್ರೀತ್ಪಾಲ್ ಸಿಂಗ್ ಅವರನ್ನು ರಾಜ್ಯದ ಅಧಿಕಾರಿಗಳಿಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.

"ರೈತರ ಆಂದೋಲನದ ಸಂದರ್ಭದಲ್ಲಿ ಗಾಯಗೊಂಡಿರುವ ಪಂಜಾಬ್‌ನ ಪ್ರೀತ್ಪಾಲ್ ಸಿಂಗ್ ಅವರು ಪಿಜಿಐ (ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್) ರೋಹ್ಟಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ" ಎಂದು ವರ್ಮಾ ಹೇಳಿದ್ದಾರೆ.

"ಪ್ರೀತ್ಪಾಲ್ ಸಿಂಗ್ ಅವರನ್ನು ಪಂಜಾಬ್ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ನಿಮ್ಮನ್ನು ವಿನಂತಿಸಲಾಗಿದೆ, ಇದರಿಂದ ಅವರ ಚಿಕಿತ್ಸೆಯು ಪಂಜಾಬ್ ಸರ್ಕಾರದಿಂದ ಪಂಜಾಬ್‌ನಲ್ಲಿ ಉಚಿತವಾಗಿ ನಡೆಯಲಿದೆ" ಎಂದು ಅವರು ಹೇಳಿದರು.

ಇದಲ್ಲದೆ, ಪಂಜಾಬ್‌ನ ಯಾವುದೇ ಆಂದೋಲನದ ರೈತ ಹರಿಯಾಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಅವರನ್ನೂ ನಮಗೆ ಒಪ್ಪಿಸಬೇಕು ಎಂದು ವರ್ಮಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com