ಲವ್ ಜಿಹಾದ್, ನಿಷೇಧಿತ ಸಂಘಟನೆಯೊಂದಿಗೆ ನಂಟು: ಇಬ್ಬರು ಶಿಕ್ಷಕರು ಅಮಾನತು!

ನಿಷೇಧಿತ ಸಂಘಟನೆಗಳೊಂದಿಗೆ ನಂಟು ಹೊಂದಿ, ಧಾರ್ಮಿಕ ಮತಾಂತರ, ಲವ್ ಜಿಹಾದ್ ನಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಟಾ: ನಿಷೇಧಿತ ಸಂಘಟನೆಗಳೊಂದಿಗೆ ನಂಟು ಹೊಂದಿ, ಧಾರ್ಮಿಕ ಮತಾಂತರ, ಲವ್ ಜಿಹಾದ್ ನಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ವರದಿಯಾಗಿದೆ. ಈ ಆರೋಪದ ಸಂಬಂಧ ಮತ್ತೋರ್ವ ಶಿಕ್ಷಕರೂ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಲವ್ ಜಿಹಾದ್ ಆರೋಪಿಸಿ ನೈತಿಕ ಪೊಲೀಸ್ ಗಿರಿ: ಹಿಂದೂಪರ ಸಂಘಟನೆಯ 7 ಮಂದಿ ಬಂಧನ

ಕೋಟಾದ ಸಂಗೋಡ್ ಬ್ಲಾಕ್ ನ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಿರ್ಜಾ ಮುಜಾಹಿದ್ ಹಾಗೂ ಫಿರೋಜ್ ಖಾನ್ ಅಮಾನತುಗೊಂಡಿರುವ ಶಿಕ್ಷಕರಾಗಿದ್ದಾರೆ. ಶಿಕ್ಷಣ ಸಚಿವರ ಆದೇಶದ ಮೇರೆಗೆ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಸರ್ವ ಹಿಂದೂ ಸಮಾಜ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ, 2019 ರಿಂದ ಶಾಲೆಯಲ್ಲಿ ಧಾರ್ಮಿಕ ಮತಾಂತರ ಹಾಗೂ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿತ್ತು.

ಶಾಲೆಯ ಮೂವರು ಶಿಕ್ಷಕರಿಗೆ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಪಾಕಿಸ್ತಾನದ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಸರ್ವ ಹಿಂದೂ ಸಮಾಜ ಶಿಕ್ಷಕರ ವಿರುದ್ಧ ಆರೋಪ ಮಾಡಿತ್ತು. ಈ ಬಗ್ಗೆ ಈ ಹಿಂದೆ ಸಂಗೋಡು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಶಾಲಾ ದಾಖಲೆಯಲ್ಲಿ ಮುಸ್ಲಿಂ ಎಂದು ಹೆಸರಿಸಲಾದ ಒಬ್ಬ ಹಿಂದೂ ಹುಡುಗಿಯನ್ನು ಮುಸ್ಲಿಂ ಯುವಕರು ಅಪಹರಿಸಿದ್ದಾರೆ ಮತ್ತು ಇನ್ನೂ ಪತ್ತೆಯಾಗಿಲ್ಲ ಎಂದು ಜ್ಞಾಪಕ ಪತ್ರದಲ್ಲಿ ಆರೋಪಿಸಲಾಗಿದೆ.

ಸಂಗ್ರಹ ಚಿತ್ರ
ಹಿಂದೂ ಬಾಲಕಿಯೊಂದಿಗೆ ಮುಸ್ಲಿಂ ಯುವಕ ಪರಾರಿ; 'ಲವ್ ಜಿಹಾದ್' ಆರೋಪ!

ಸಂಗೋಡ್‌ನ ಖಜೂರಿ ಓಡ್‌ಪುರ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಮೂವರು ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ದಿಲಾವರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com