ನವದೆಹಲಿ: ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.
ವಿಜಯ ಧರಣಿ, ಕೇಂದ್ರ ಸಚಿವ ವಿಜಯ ಧರಣಿ ಮತ್ತಿತರರು
ವಿಜಯ ಧರಣಿ, ಕೇಂದ್ರ ಸಚಿವ ವಿಜಯ ಧರಣಿ ಮತ್ತಿತರರು

ನವದೆಹಲಿ: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ಪಕ್ಷದ ತಮಿಳುನಾಡು ಉಸ್ತುವಾರಿ ಅರವಿಂದ್ ಮೆನನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ವಿಜಯ ಧರಣಿ ಘೋಷಿಸಿದ್ದರು. ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಬಿಜೆಪಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಜಯಧರಣಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಿಂದ ಪ್ರಭಾವಿತರಾಗಿದ್ದು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಂತಹ ಕೆಲವು ರಾಜ್ಯಗಳಲ್ಲಿ ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿಲ್ಲ. ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲು ಕಾನೂನು ಜಾರಿಗೆ ತಂದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನುಅಭಿನಂದಿಸುವುದಾಗಿ ತಿಳಿಸಿದರು.

ವಿಜಯ ಧರಣಿ, ಕೇಂದ್ರ ಸಚಿವ ವಿಜಯ ಧರಣಿ ಮತ್ತಿತರರು
'ಒಂದು ರಾಷ್ಟ್ರ ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ 

ಈ ಮಧ್ಯೆ ವಿಜಯ ಧರಣಿ ಅವರನ್ನು ಅನರ್ಹಗೊಳಿಸಲು ಪಕ್ಷವು ತಮಿಳುನಾಡು ವಿಧಾನಸಭಾ ಸ್ಪೀಕರ್ ಸಂಪರ್ಕಿಸುತ್ತದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆ. ಸೆಲ್ವಪೆರುಂತಗೈ ಹೇಳಿದ್ದಾರೆ. ವಿಜಯಧರಣಿ ತಮ್ಮ ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದ್ದರು. ಅವರು 2011 ರಿಂದ ವಿಲವಂಕೋಡ್ ನ್ನು ಪ್ರತಿನಿಧಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com