ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ ಮತ್ತು ಜನಸೇನಾ ಪಕ್ಷದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿಯಾಗಿ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದಾರೆ.
ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್
ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್
Updated on

ವಿಜಯವಾಡ: ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿಯಾಗಿ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದಾರೆ.

ಜನಸೇನಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಿರಾಸೆ ಮೂಡಿಸಿರುವ ಪವನ್ ಕಲ್ಯಾಣ್ ತಮ್ಮ ಪಕ್ಷವು 24 ವಿಧಾನಸಭೆ ಮತ್ತು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ ಎಂದು ಶನಿವಾರ ಘೋಷಿಸಿದ್ದಾರೆ.

ಉಂಡವಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟಿಡಿಪಿ ಮುಖ್ಯಸ್ಥರು 94 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜನಸೇನೆ 5 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ, ಪವನ್ ಕಲ್ಯಾಣ್ ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ಮಾಹಿತಿಯಿಲ್ಲ.

ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್
ಎನ್‌ಡಿಎಗೆ ಮರಳಲು ಟಿಡಿಪಿ ಸಜ್ಜು: ಮುಂದಿನ ವಾರ ಮೈತ್ರಿ ಘೋಷಣೆ ಸಾಧ್ಯತೆ!

ಜನಸೇನೆ ಪಕ್ಷ 24 ವಿಧಾನಸಭಾ ಸ್ಥಾನಗಳು ಮತ್ತು ಮೂರು ಲೋಕಸಭಾ ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲು ಪವನ್ ಕಲ್ಯಾಣ್ ನಿರ್ಧರಿಸಿದ್ದಾರೆ. ಮತ ವಿಭಜನೆಯನ್ನು ತಡೆಯುವುದು ಪ್ರಾಥಮಿಕ ಗುರಿಯಾಗಿದೆ ಮತ್ತು ಹೆಚ್ಚಿನ ಯಶಸ್ಸಿನ ಪ್ರಮಾಣವನ್ನು ಸಾಧಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಹೆಚ್ಚು ಸ್ಥಾನಗಳಲ್ಲಿ ಸ್ಪರ್ದಿಸಿ ಪ್ರಯೋಗ ನಡೆಸುವ ಬದಲು, ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ವಾಸ್ತವವಾಗಿ, ನಾವು 3 ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ, ಇದರ ಜೊತೆಗೆ ಬಿಜೆಪಿ ಮೈತ್ರಿಗೆ ಸೇರುವುದನ್ನು ಪರಿಗಣಿಸಿ, ನಾವು ನಮ್ಮ ಸ್ಥಾನಗಳನ್ನು ಕಡಿಮೆ ಮಾಡಿದ್ದೇವೆ ಎಂದು ಅವರು ಹೇಳಿದರು, 2019 ರಲ್ಲಿ ಕನಿಷ್ಠ 10 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ನಾವು ಹೆಚ್ಚಿನ ಕ್ಷೇತ್ರ ಕೇಳಬಹುದಿತ್ತು ಎಂದು ಪವನ್ ಹೇಳಿದ್ದಾರೆ.

ಉಭಯ ಪಕ್ಷಗಳ ಮೊದಲ ಪಟ್ಟಿಯಲ್ಲಿ ಘೋಷಿಸಲಾದ 99 ಅಭ್ಯರ್ಥಿಗಳ ಪೈಕಿ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಿಂದ ಅವರ ಪುತ್ರ ನಾರಾ ಲೋಕೇಶ್ ಮಂಗಳಗಿರಿ, ಕೆ ಅಚ್ಚನಾಯ್ಡು ತೆಕ್ಕಲಿ, ಎನ್ ಬಾಲಕೃಷ್ಣ ಹಿಂದೂಪುರ ಮತ್ತು ಜೆಎಸ್‌ಪಿ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂದ್ಲ ಮನೋಹರ್ ತೆನಾಲಿಯಿಂದ ಸ್ಪರ್ಧಿಸಲಿದ್ದಾರೆ.

ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್
ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್

ಟಿಡಿಪಿ ಪಟ್ಟಿಯಲ್ಲಿರುವ 94 ಅಭ್ಯರ್ಥಿಗಳಲ್ಲಿ 23 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ, ಇದು ಸಾಂಪ್ರದಾಯಿಕ ರಾಜಕೀಯ ತಂತ್ರಗಳಿಂದ ಧೈರ್ಯಶಾಲಿ ಬದಲಾವಣೆಯನ್ನು ಸೂಚಿಸುತ್ತದೆ. ಪಟ್ಟಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ 28 ಅಭ್ಯರ್ಥಿಗಳು, ಸ್ನಾತಕಪೂರ್ವ ಪದವಿ ಹೊಂದಿರುವ 50 ಅಭ್ಯರ್ಥಿಗಳು, 3 ವೈದ್ಯರು, 2 ಪಿಎಚ್‌ಡಿ ಪದವೀದರರು ಮತ್ತು ಓರ್ವ ಐಎಎಸ್ ಅಧಿಕಾರಿ ಸೇರಿದ್ದಾರೆ ಎಂದು ನಾಯ್ಡು ತಿಳಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ವೈಎಸ್‌ಆರ್‌ಸಿ ಪಟ್ಟಿಯಲ್ಲಿ ಕೆಂಪು ಮರಳು ಕಳ್ಳಸಾಗಣೆದಾರರಿಗೆ ಟಿಕೆಟ್ ನೀಡಲಾಗಿದೆ ಎಂದು ಲೇವಡಿ ಮಾಡಿದ್ದಾರೆ. 1 ಕೋಟಿ 3 ಲಕ್ಷದ 33 ಸಾವಿರಕ್ಕೂ ಹೆಚ್ಚು ಜನರ ಅಭಿಪ್ರಾಯಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಟಿಡಿಪಿ-ಜೆಎಸ್‌ಪಿ ಚುನಾವಣಾ ಯುದ್ಧಕ್ಕೆ ಸಿದ್ಧವಾಗಿದೆ. ರಾಜ್ಯದ ಭವಿಷ್ಯ ಮತ್ತು ಆಂಧ್ರಪ್ರದೇಶದ ಉಜ್ವಲ ಭವಿಷ್ಯಕ್ಕಾಗಿ ಈ ಮೈತ್ರಿ ರಚನೆಯಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com