ಕೌಶಂಬಿ: ಉತ್ತರ ಪ್ರದೇಶದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಏಳಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯು ವಸತಿ ಪ್ರದೇಶದಿಂದ ದೂರದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಖಾನೆಯವರು ಪಟಾಕಿ ತಯಾರಿಸಲು ಮತ್ತು ಮಾರಾಟ ಮಾಡಲು ಪರವಾನಗಿ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
Advertisement