ಲೋಕಸಭಾ ಚುನಾವಣೆ; ಮಾದರಿ ನೀತಿ ಸಂಹಿತೆ ಜಾರಿ ನಂತರವೂ ರೈತರ ಪ್ರತಿಭಟನೆ ನಿಲ್ಲಲ್ಲ!

ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.
ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ಪ್ರತಿಭಟನೆ ನಡೆಸಿದರು.
ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ಪ್ರತಿಭಟನೆ ನಡೆಸಿದರು.

ಚಂಡೀಗಢ: ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

ಶಂಭು ಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಎಂಎಸ್‌ಸಿ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್, ರೈತರ ಸಂಕಲ್ಪಕ್ಕೆ ಒತ್ತು ನೀಡಿ, ನಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ಈ ಆಂದೋಲನ ಮುಂದುವರಿಯುತ್ತದೆ. ಕೇಂದ್ರವು ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡರೆ, ನಾವು ನಮ್ಮ ನಿರ್ಧಾರವನ್ನು ಮರುಪರಿಶೀಲಿಸುತ್ತೇವೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆ ಮತ್ತು ಮಾದರಿ ನೀತಿ ಸಂಹಿತೆ ಜಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಂಧೇರ್, 'ನಾವು ಟಿಕೆಟ್ ಹಂಚಿಕೆ ಅಥವಾ ಮತಗಟ್ಟೆಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮಾದರಿ ನೀತಿ ಸಂಹಿತೆಯ ಬಗ್ಗೆ ನಮಗೆ ಕಾಳಜಿ ಇಲ್ಲ. ನೀತಿ ಸಂಹಿತೆ ಜಾರಿಯ ನಡುವೆಯೂ ಪ್ರತಿಭಟನೆ ಮುಂದುವರಿಕೆಯತ್ತ ನಾವು ಗಮನ ಹರಿಸುತ್ತೇವೆ ಎಂದರು.

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ಪ್ರತಿಭಟನೆ ನಡೆಸಿದರು.
ರೈತರ 'ದಿಲ್ಲಿ ಚಲೋ' ಹೋರಾಟ ಫೆ.29ರವರೆಗೆ ಸ್ಥಗಿತ: ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ

27 ವರ್ಷದ ಪ್ರೀತ್ಪಾಲ್ ಸಿಂಗ್ ಅವರು ಖಾನೌರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರ ಮನವಿ ಮೇರೆಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಪಿಜಿಐ ರೋಹ್ಟಕ್‌ನಿಂದ ಪಿಜಿಐ ಚಂಡೀಗಢಕ್ಕೆ ಸ್ಥಳಾಂತರಿಸಲಾಗಿದೆ. ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸ್ಥಳಾಂತರವನ್ನು ಖಚಿತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com