ಬಿಹಾರ: ಟ್ರಕ್-ಜೀಪ್-ಬೈಕ್ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಸಾವು

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಜನ ಸಾವು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೈಮೂರ್(ಬಿಹಾರ): ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿ ಜಿಟಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ನಂತರ ಎದುರುಗಡೆಯಿಂದ ಬರುತ್ತಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮತ್ತು ಬೈಕ್ ಎರಡಕ್ಕೂ ಡಿಕ್ಕಿ ಹೊಡೆದಿದೆ" ಎಂದು ಮೊಹಾನಿಯಾ ಡಿಎಸ್ಪಿ ದಿಲೀಪ್ ಕುಮಾರ್ ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ: 6 ಮಂದಿ ದುರ್ಮರಣ

"ಭೀಕರ ಅಪಘಾತದಲ್ಲಿ ಮೋಟಾರ್‌ಸೈಕ್ಲಿಸ್ಟ್ ಸೇರಿದಂತೆ ಎಲ್ಲಾ ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ" ಕುಮಾರ್ ಹೇಳಿದ್ದಾರೆ.

ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಏತನ್ಮಧ್ಯೆ, ಬಿಹಾರ ಮುಖ್ಯಮಂತ್ರಿಗಳ ಕಚೇರಿ ಭಾನುವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, “ಕೈಮೂರ್‌ನ ಮೊಹಾನಿಯಾ ಬಳಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಸಿಎಂ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com