ಜಾರ್ಖಂಡ್‌: ಆನೆ ದಾಳಿಗೆ ಇಬ್ಬರು ಮಹಿಳೆಯರು ಮೂವರು ಬಲಿ

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 100 ಕಿಮೀ ದೂರದಲ್ಲಿರುವ ಲಾಲ್ಪಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡ್ವತಂಡ್ ಪಂಚಾಯತ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಮೊದಲು 60 ವರ್ಷದ ವ್ಯಕ್ತಿಯನ್ನು ತುಳಿದು ಕೊಂದಿದೆ ಎಂದು ಬೊಕಾರೊ ವಿಭಾಗೀಯ ಅರಣ್ಯಾಧಿಕಾರಿ ರಜನೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಆನೆ ದಾಳಿ: 3 ವರ್ಷದಲ್ಲಿ ಕೊಡಗು ಒಂದರಲ್ಲೇ 18 ಮಂದಿ ಬಲಿ

"ನಂತರ, ಅದೇ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಇಬ್ಬರು ಮಹಿಳೆಯರ ಮೇಲೆ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯರು ಸಾವನ್ನಪ್ಪಿದರು" ಕುಮಾರ್ ಹೇಳಿದ್ದಾರೆ.

ಮೃತರನ್ನು ಸೋನು ಮಾಂಝಿ(60), ಮಂಜ್ರಿ ದೇವಿ(30) ಮತ್ತು ಸುಹಾನಿ ಹೆಂಬ್ರಾಮ್(24) ಎಂದು ಗುರುತಿಸಲಾಗಿದೆ.

ಮಾಂಝಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮತ್ತು ಹೆಂಬ್ರಾಮ್ ಅವರು ಬಾವಿಗೆ ನೀರು ತರಲು ಹೋಗುತ್ತಿದ್ದಾಗ ಆನೆ ದಾಳಿ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com