ಮಧ್ಯ ಪ್ರದೇಶ: ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಉದ್ಯೋಗಿ ಆತ್ಮಹತ್ಯೆಗೆ ಶರಣು

ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇಂದೋರ್‌: ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಅವರು ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಈ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ಅವರು ಹೇಳಿದ್ದಾರೆ.

ಗೌರವ್ ಗುಪ್ತಾ ಅವರು ಭಾನುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ ಎಂದು ಸೋನಿ ಹೇಳಿದ್ದಾರೆ.

ಇತ್ತೀಚಿಗಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಮಾರ್ಚ್ 15 ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ನಿರ್ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com