ಕಾಂಗ್ರೆಸ್
ಕಾಂಗ್ರೆಸ್TNIE

ಹಿಮಾಚಲಯೇತರ ವ್ಯಕ್ತಿ ರಾಜ್ಯಸಭೆಗೆ ಸ್ಪರ್ಧಿಸಿದ್ದೇ ಕಾಂಗ್ರೆಸ್ ಭಿನ್ನಮತಕ್ಕೆ ಕಾರಣ!

ಹಿಮಾಚಲದ ವ್ಯಕ್ತಿಯಲ್ಲವದರು ರಾಜ್ಯ ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದೇ ಕಾಂಗ್ರೆಸ್ ಗೆ ಹಿನ್ನಡೆ ಉಂಟಾಗಲು ಕಾರಣ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
Published on

ಶಿಮ್ಲಾ: ಹಿಮಾಚಲದ ವ್ಯಕ್ತಿಯಲ್ಲವದರು ರಾಜ್ಯ ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದೇ ಕಾಂಗ್ರೆಸ್ ಗೆ ಹಿನ್ನಡೆ ಉಂಟಾಗಲು ಕಾರಣ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. 14 ತಿಂಗಳ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಠಾಕೂರ್ ಆರೋಪಿಸಿದ್ದಾರೆ.

ಹಿಮಾಚಲ ಪ್ರದೇಶದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಬಿಜೆಪಿಯ ಅಭ್ಯರ್ಥಿ ಹರೀಶ್ ಮಹಾಜನ್ ವಿರುದ್ಧ ಸೋಲು ಕಂಡಿದ್ದರು.ಜನರು ಹಾಗೂ ಶಾಸಕರಲ್ಲಿ ಕಾಂಗ್ರೆಸ್ ವಿರುದ್ಧ ಅಸಮಾಧಾನವಿದೆ, ಶಾಸಕರು ತಮ್ಮದೇ ಅಭ್ಯರ್ಥಿ ವಿರುದ್ಧ ಮತಚಲಾವಣೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಠಾಕೂರ್ ಹೇಳಿದ್ದಾರೆ.

ಕಾಂಗ್ರೆಸ್
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಶಿಮ್ಲಾಗೆ ದೌಡು!

ಈ ಭಿನ್ನಮತ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚುತ್ತಿದೆ, ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂಬ ಭ್ರಮನಿರಸನ ಉಂಟಾಗಿದ್ದು, ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ಪ್ರಶ್ನಿಸಲಾಗುತ್ತಿದೆ ಎಂದು ಠಾಕೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com