ಬಂಡಾಯ ಶಾಸಕರ ಅನರ್ಹತೆ ಆದೇಶ ಕಾಯ್ದಿರಿಸಿದ ಹಿಮಾಚಲ ಸ್ಪೀಕರ್; 'ಬಿಜೆಪಿ ಷಡ್ಯಂತ್ರ ವಿಫಲವಾಗಿದೆ' ಎಂದ ಸಿಎಂ ಸುಖು

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಕೆಲವು ಶಾಸಕರು ಅಡ್ಡ ಮತದಾನ ಮಾಡಿದ ನಂತರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ.
ಕಾಂಗ್ರೆಸ್ ವೀಕ್ಷಕರು
ಕಾಂಗ್ರೆಸ್ ವೀಕ್ಷಕರು

ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಕೆಲವು ಶಾಸಕರು ಅಡ್ಡ ಮತದಾನ ಮಾಡಿದ ನಂತರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಬುಧವಾರ ನಾಟಕೀಯ ಬೆಳವಣಿಗೆಗಳ ನಡುವೆ ಹೈ-ಪ್ರೊಫೈಲ್ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ಘೋಷಿಸಿದ್ದಾರೆ ಮತ್ತು ವಿಧಾನಸಬೆ ಸ್ಪೀಕರ್ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಮಂಗಳವಾರ ಅಡ್ಡ ಮತದಾನ ಮಾಡಿದ್ದರಿಂದ ರಾಜಕೀಯ ಬಿಕ್ಕಟ್ಟು ಉಂಟಾಗಿದೆ.

ಕಾಂಗ್ರೆಸ್ ಅಡ್ಡ ಮಾತದಾನ ಮಾಡಿದ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸುವಂತೆ ಕೋರಿದ್ದು, ವಿಚಾರಣೆ ನಡೆಸಿದ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ಅಡ್ಡ ಮತದಾನ ಮಾಡಿದ ಆರು ಶಾಸಕರ ಪರವಾಗಿ ಸ್ಪೀಕರ್ ಮುಂದೆ ವಾದ ಮಂಡಿಸಿದ ಹಿರಿಯ ವಕೀಲ ಸತ್ಯಪಾಲ್ ಜೈನ್ ಅವರು, ಪಕ್ಷಾಂತರ ನಿಷೇಧ ಕಾನೂನು ರಾಜ್ಯಸಭಾ ಚುನಾವಣೆಗೆ ಅನ್ವವಿಸುವುದಿಲ್ಲ. ಈ ಸಂದರ್ಭದಲ್ಲಿ ಪಕ್ಷದ ವಿಪ್ ಸಹ ಅನ್ವಯಿಸುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

68 ಸದಸ್ಯ ಬಲದ ಅರುಣಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಶಾಸಕರನ್ನು ಹೊಂದಿದ್ದರೆ, ಬಿಜೆಪಿ 25 ಶಾಸಕರನ್ನು ಹೊಂದಿದೆ. ಮೂವರು ಪಕ್ಷೇತರ ಶಾಸಕರಿದ್ದಾರೆ.

ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮಾಜಿ ಮುಖ್ಯಮಂತ್ರಿಗಳಾದ ಭೂಪೇಶ್ ಬಘೇಲ್, ಭೂಪಿಂದರ್ ಸಿಂಗ್ ಹೂಡಾ ಅವರು ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲು ಹಾಗೂ ಅತೃಪ್ತ ಶಾಸಕರ ಮನವೊಲಿಸಲು ವೀಕ್ಷಕರಾಗಿ ಶಿಮ್ಲಾಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ವೀಕ್ಷಕರು
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಶಿಮ್ಲಾಗೆ ದೌಡು!

'ಐದು ವರ್ಷ ಸರ್ಕಾರ ನಡೆಸುತ್ತೇವೆ'

ಏತನ್ಮಧ್ಯೆ, ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಐದು ವರ್ಷಗಳ ಕಾಲ ನಾವೇ ಸರ್ಕಾರ ನಡೆಸುತ್ತೇವೆ ಎಂದು ಹೇಳಿದ್ದು, "ಹೈಕಮಾಂಡ್ ನನ್ನನ್ನು ಅಥವಾ ಬೇರೆ ಯಾರ ರಾಜೀನಾಮೆ ಕೇಳಿಲ್ಲ ಮತ್ತು ಅಂತಹದ್ದೇನೂ ಇಲ್ಲ" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ರಾಜ್ಯ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷ ಅಂಗೀಕರಿಸಿಲ್ಲ ಮತ್ತು ಅವರ ಅಸಮಾಧಾನವನ್ನು ಪರಿಹರಿಸಲು ಮಾತುಕತೆ ನಡೆಸಲಾಗುತ್ತಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com