'ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ' ಅಭಿಯಾನಕ್ಕೆ ಚಾಲನೆ

ಯುವ ಮತದಾರರು, ಮೊದಲ ಬಾರಿ ಮತ ಚಲಾಯಿಸುವವರಿಗೆ ಉತ್ತೇಜನ
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್

ಚೆನ್ನೈ: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು 'ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ' (ರಾಷ್ಟ್ರಕ್ಕೆ ನನ್ನ ಮೊದಲ ಮತ) ಎಂಬ ಶೀರ್ಷಿಕೆಯನ್ನು ಒಳಗೊಂಡ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಯುವ ಮತದಾರರು, ಮೊದಲ ಬಾರಿಗೆ ಮತ ಚಲಾಯಿಸುವವರು ತಮ್ಮ ಹಕ್ಕು ಚಲಾಯಿಸಲು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಫೆಬ್ರವರಿ 28 ರಿಂದ ಮಾರ್ಚ್ 6 ರವರೆಗೆ ಕೇಂದ್ರ ಸರ್ಕಾರ ಈ ಅಭಿಯಾನ ಕೈಗೊಂಡಿದ್ದು, ಸಮಗ್ರ ಮತದಾರರ ಜಾಗೃತಿ ಚಟುವಟಿಕೆಗಳನ್ನು ನಡೆಸುವಂತೆ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿರುವುದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವ ಬಗ್ಗೆ ಕರೆ ನೀಡಿದ್ದಾರೆ.

ಭಾರತೀಯ ಚುನಾವಣಾ ಆಯೋಗವು (ECI) ಮತದಾರರ ಜಾಗೃತಿಗಾಗಿ ಪ್ರಾರಂಭಿಸಿರುವ ಅಭಿಯಾನಕ್ಕೆ ಕೊಡುಗೆ ನೀಡುವ ಪ್ರಯತ್ನವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com