ಜಾರ್ಖಂಡ್‌: ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹರಿದ ರೈಲು, ಇಬ್ಬರು ಸಾವು

ಜಾರ್ಖಂಡ್‌ನ ಜಮ್ತಾರಾದ ಕಾಲಜಾರಿಯಾ ರೈಲು ನಿಲ್ದಾಣದಲ್ಲಿ ಬುಧವಾರ ಪ್ರಯಾಣಿಕರ ಮೇಲೆ ರೈಲು ಹರಿದಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ತಾರಾ: ಜಾರ್ಖಂಡ್‌ನ ಜಮ್ತಾರಾದ ಕಾಲಜಾರಿಯಾ ರೈಲು ನಿಲ್ದಾಣದಲ್ಲಿ ಬುಧವಾರ ಪ್ರಯಾಣಿಕರ ಮೇಲೆ ರೈಲು ಹರಿದಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.

ಕೆಲವು ಪ್ರಯಾಣಿಕರು ರಾಂಗ್ ಸೈಡ್ ನಿಂದ ರೈಲಿನಿಂದ ಇಳಿದು ಹಳಿ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಜಮ್ತಾರಾ ಉಪವಿಭಾಗದ ಪೊಲೀಸ್ ಅಧಿಕಾರಿ(ಎಸ್‌ಡಿಪಿಒ) ಎಂ ರೆಹಮಾನ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಇನ್ನೊಂದು ಮಾರ್ಗದಲ್ಲಿ ಬರುತ್ತಿದ್ದ ಲೋಕಲ್ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. "ಪ್ರಯಾಣಿಕರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಪ್ರಮಾಣ ಹೆಚ್ಚಾಗಬಹುದು" ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ವೈದ್ಯಕೀಯ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ ಎಂದು ಜಮ್ತಾರಾ ಉಪ ಆಯುಕ್ತರು ತಿಳಿಸಿದ್ದಾರೆ.

“ಘಟನೆಗೆ ಕಾರಣರಾದವರನ್ನು ಗುರುತಿಸುವಂತೆ ನಾನು ನಿರ್ದೇಶನ ನೀಡಿದ್ದೇನೆ. ವಿಧಾನಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ' ಎಂದು ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com