ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಪಕ್ಷದ ಆರು ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 'ಕೈ' ಶಾಸಕರು ಅಮಾನತು
ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 'ಕೈ' ಶಾಸಕರು ಅಮಾನತು

ಶಿಮ್ಲಾ: ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಪಕ್ಷದ ಆರು ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಪಕ್ಷದ ವಿಪ್ ಧಿಕ್ಕರಿಸಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 'ಕೈ' ಶಾಸಕರು ಅಮಾನತು
ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆಗೆ ಅಡ್ಡಮತದಾನ: ಕಾಂಗ್ರೆಸ್ ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು!

ನಿನ್ನೆ ಸದನದಲ್ಲಿ ಹಣಕಾಸು ಮಸೂದೆಯ ಮೇಲೆ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಇಂದು ಹೇಳಿದ್ದಾರೆ. ಸ್ಪೀಕರ್ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ನಂತರ ವಿಧಾನಸಭೆ ರಾಜ್ಯ ಬಜೆಟ್ ಅನ್ನು ಅಂಗೀಕರಿಸಿತ್ತು.

ಹಿಮಾಚಲ ಪ್ರದೇಶ ಅಸೆಂಬ್ಲಿ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಈ ಬಗ್ಗೆ ಮಾತನಾಡಿದ್ದು, "ಕಾಂಗ್ರೆಸ್ ಚಿಹ್ನೆಯಲ್ಲಿ ಸ್ಪರ್ಧಿಸಿದ ಆರು ಶಾಸಕರು ತಮ್ಮ ವಿರುದ್ಧ ಪಕ್ಷಾಂತರ ವಿರೋಧಿ ಕಾನೂನಿನ ನಿಬಂಧನೆಗಳನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಆರು ಮಂದಿ ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಮಾಚಲ ಪ್ರದೇಶ ವಿಧಾನಸಭೆಯ ಸದಸ್ಯತ್ವ ಅನರ್ಹಗೊಳಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಡ್ಡಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 'ಕೈ' ಶಾಸಕರು ಅಮಾನತು
ರಾಜ್ಯಸಭೆ ಚುನಾವಣೆ ಫಲಿತಾಂಶ: ಯುಪಿಯಲ್ಲಿ 8 ಸ್ಥಾನ ಗೆದ್ದ ಬಿಜೆಪಿ, ಎರಡು ಸ್ಥಾನ ಉಳಿಸಿಕೊಂಡ ಎಸ್‌ಪಿ

ಅನರ್ಹಗೊಂಡ ಶಾಸಕರೆಂದರೆ ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದರ್ ದತ್ ಲಖನ್‌ಪಾಲ್, ದೇವಿಂದರ್ ಕುಮಾರ್ ಭೂಟೂ, ರವಿ ಠಾಕೂರ್ ಮತ್ತು ಚೆತನ್ಯ ಶರ್ಮಾ ಎನ್ನಲಾಗಿದೆ.

ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ಹಿಂದಿನ ರಾತ್ರಿ ತಂಗಿದ್ದ ಆರು ಶಾಸಕರು ನಿನ್ನೆ ವಿಧಾನಸಭೆಗೆ ಬಂದಾಗ ಅವರ 'ಶೌರ್ಯ'ಕ್ಕೆ ಬಿಜೆಪಿ ಸದಸ್ಯರು ಚಪ್ಪಾಳೆ ತಟ್ಟಿ ಅಭಿನಂದಿಸಿತ್ತು. ಈ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com