ವಿಭಜನೆ ಎನ್ನುವುದು ಕಾಂಗ್ರೆಸ್ DNA ಯಲ್ಲೇ ಇದೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ವಿಧಾನಸಭೆಯ ಹೊರಗೆ 'ಪಾಕಿಸ್ತಾನ ಪರ' ಘೋಷಣೆಗಳನ್ನು ಕೂಗಿದ ಆರೋಪದ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಡಿಎನ್‌ಎಯಲ್ಲಿ ವಿಭಜನೆ ಎನ್ನುವುದು ಅಂತರ್ಗತವಾಗಿದೆ ಎಂದು ಹೇಳಿದ್ದಾರೆ.
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ

ನಾಗ್ಪುರ: ವಿಧಾನಸಭೆಯ ಹೊರಗೆ 'ಪಾಕಿಸ್ತಾನ ಪರ' ಘೋಷಣೆಗಳನ್ನು ಕೂಗಿದ ಆರೋಪದ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಡಿಎನ್‌ಎಯಲ್ಲಿ ವಿಭಜನೆ ಎನ್ನುವುದು ಅಂತರ್ಗತವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶವನ್ನು ವಿಭಜಿಸಲು ಕಾಂಗ್ರೆಸ್ ಪಕ್ಷ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.

ಮಾರ್ಚ್ 4 ರಂದು ನಾಗ್ಪುರದಲ್ಲಿ ಆಯೋಜಿಸಲಾದ 'ನಮೋ ಮಹಾ ಯುವ ಸಮ್ಮೇಳನ'ದ ರ್ಯಾಲಿಯನ್ನುದ್ದೇಶಿಸಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಾತನಾಡಲಿದ್ದಾರೆ. ಸಮಾವೇಶದಲ್ಲಿ ಮಹಾರಾಷ್ಟ್ರದ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ತಿಳಿಸಿದ್ದಾರೆ.

ಮಂಗಳವಾರ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸೈಯದ್ ನಾಸೀರ್ ಹುಸೇನ್ ಅವರ ಗೆಲುವಿನ ನಂತರ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಅವರ ಬೆಂಬಲಿಗರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಸಂಸದ ತೇಜಸ್ವಿ ಸೂರ್ಯ
ಲೋಕಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್ ಬೆಂಗಳೂರು ದಕ್ಷಿಣಕ್ಕೆ, ರಾಜೀವ್ ಚಂದ್ರಶೇಖರ್ ಸೆಂಟ್ರಲ್ ಗೆ; ತೇಜಸ್ವಿ ಸೂರ್ಯ ಎಲ್ಲಿಗೆ?

ಈ ಬಗ್ಗೆ ಪ್ರಶ್ನಿಸಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಪಕ್ಷ ದೇಶವನ್ನು ವಿಭಜಿಸುವ ಹೊಣೆ ಹೊತ್ತಿದೆ. ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲಿಯೇ ವಿಭಜನೆ ಇದೆ, ಇದನ್ನು ಬಿಟ್ಟು ಬೇರೆ ಏನನ್ನೂ ಕಾಂಗ್ರೆಸ್‌ನಿಂದ ನಿರೀಕ್ಷಿಸುವುದು ತಪ್ಪಾಗುತ್ತದೆ' ಎಂದು ಅವರು ಪ್ರತಿಪಾದಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತ ಬಿಜೆಪಿಯ ಭದ್ರಕೋಟೆಯಾಗಲಿದೆ. ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆದ್ದು, ತೆಲಂಗಾಣ ಮತ್ತು ತಮಿಳುನಾಡಿನಲ್ಲಿಯೂ ಐತಿಹಾಸಿಕ ಜನಾದೇಶ ಪಡೆಯಲಿದೆ ಎಂದು ಹೇಳಿದರು.

ಬಿಜೆಪಿಯು ಕೇರಳದಲ್ಲೂ ಲೋಕಸಭಾ ಸದಸ್ಯರನ್ನೂ ಹೊಂದಲಿದ್ದು, ಆಂಧ್ರಪ್ರದೇಶದಲ್ಲಿ ಪಕ್ಷದ ಮತ ಹಂಚಿಕೆ ಶೇಕಡಾವಾರು ಹೆಚ್ಚಾಗಲಿದೆ ಎಂದು ಅವರು ಹೇಳಿದರು.

2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ದೇಶದ ಯುವಕರು ದೊಡ್ಡ ಕೊಡುಗೆ ನೀಡಿದ್ದಾರೆ. ಅವರಲ್ಲಿ ಹೆಚ್ಚಿನವರು ಬದಲಾವಣೆಯನ್ನು ಬಯಸಿದ ಮೊದಲ ಬಾರಿಗೆ ಮತ ಚಲಾಯಿಸುವವರಾಗಿದ್ದಾರೆ. ಯುವಕರು ಬಿಜೆಪಿ ಗೆಲುವಿಗೆ ಶಕ್ತಿ ತುಂಬಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಳೆದ 10 ವರ್ಷಗಳಲ್ಲಿ ಯುವ ಕೇಂದ್ರಿತ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com