ಬೈಸಿಕಲ್‌ಗೆ ಕಾರು ಡಿಕ್ಕಿ: ಇಂಟೆಲ್ ಇಂಡಿಯಾ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಸಾವು

ಇಂಟೆಲ್ ಇಂಡಿಯಾದ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಅವರು ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಬ್ ಡಿಕ್ಕಿಯಾಗಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅವತಾರ್ ಸೈನಿ
ಅವತಾರ್ ಸೈನಿ

ಮುಂಬೈ: ಇಂಟೆಲ್ ಇಂಡಿಯಾದ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಅವರು ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಬ್ ಡಿಕ್ಕಿಯಾಗಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮುಂಜಾನೆ 5.50ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ನೆರೂಲ್ ಪ್ರದೇಶದ ಪಾಮ್ ಬೀಚ್ ರಸ್ತೆಯಲ್ಲಿ ಸೈನಿ (68) ಸಹ ಸೈಕ್ಲಿಸ್ಟ್‌ಗಳೊಂದಿಗೆ ಬೈಸಿಕಲ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೈನಿ ಅವರ ಬೈಸಿಕಲ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಕ್ಸಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆದರೆ, ಟ್ಯಾಕ್ಸಿಯ ಮುಂಭಾಗದ ಚಕ್ರಗಳ ಅಡಿಯಲ್ಲಿ ಸೈಕಲ್‌ ಸಿಕ್ಕಿಹಾಕಿಕೊಂಡಿದ್ದರಿಂದ ಚಾಲಕ ತಕ್ಷಣ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

ಗಾಯಗೊಂಡ ಸೈನಿ ಅವರನ್ನು ಸೈಕ್ಲಿಸ್ಟ್‌ಗಳು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಸೈನಿ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉಪನಗರ ಚೆಂಬೂರಿನ ನಿವಾಸಿಯಾದ ಸೈನಿ ಅವರು ಇಂಟೆಲ್ 386 ಮತ್ತು 486 ಮೈಕ್ರೊಪ್ರೊಸೆಸರ್‌ಗಳಲ್ಲಿ ಕೆಲಸ ಮಾಡಿದ ಕೀರ್ತಿಗೆ ಪಾತ್ರರಾಗಿದ್ದರು. ಅವರು ಕಂಪನಿಯ ಪೆಂಟಿಯಮ್ ಪ್ರೊಸೆಸರ್ ವಿನ್ಯಾಸವನ್ನು ಮುನ್ನಡೆಸಿದರು.

ಪೊಲೀಸರು ಕ್ಯಾಬ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಎನ್‌ಆರ್‌ಐ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com