ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ವಿಫಲ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ: ಕಾಂಗ್ರೆಸ್

ಹಿಮಾಚಲ ಪ್ರದೇಶದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ವಿಫಲವಾಗಿದ್ದು, ಪರಿಸ್ಥಿತಿ "ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ" ಎಂದು ಕಾಂಗ್ರೆಸ್ ಗುರುವಾರ ಪ್ರತಿಪಾದಿಸಿದೆ.
ಜೈರಾಮ್ ರಮೇಶ್
ಜೈರಾಮ್ ರಮೇಶ್

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ವಿಫಲವಾಗಿದ್ದು, ಪರಿಸ್ಥಿತಿ "ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ" ಎಂದು ಕಾಂಗ್ರೆಸ್ ಗುರುವಾರ ಪ್ರತಿಪಾದಿಸಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತನ್ನ ಕೆಲವು ಶಾಸಕರ ಅಡ್ಡ ಮತದಾನದಿಂದಾಗಿ ಸಂಖ್ಯಾಬಲ ಹೊಂದಿದ್ದರೂ ಏಕೈಕ ರಾಜ್ಯಸಭಾ ಸ್ಥಾನವನ್ನು ಕಳೆದುಕೊಂಡ ನಂತರ ಬಿಕ್ಕಟ್ಟನ್ನು ಎದುರಿಸುತ್ತಿದೆ.

ಅಡ್ಡ ಮತದಾನ ಮಾಡಿದ ಆರು ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದು, ಅವರ ಅನರ್ಹತೆಯನ್ನು ಸದನದಿಂದ ಪ್ರಶ್ನಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಇತರ ರಾಜ್ಯಗಳಂತೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಹಣಬಲ, ಸರ್ಕಾರದ ಬಲ ಮತ್ತು ಭುಜ ಬಲವನ್ನು ಬಳಸಿಕೊಂಡು ಆಟವನ್ನು ಪ್ರಾರಂಭಿಸಿತ್ತು. ಆದರೆ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಜೈರಾಮ್ ರಮೇಶ್
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಹಿಮಾಚಲ ಪ್ರದೇಶದ 6 'ಕೈ' ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

"ಹಿಮಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವಿವಿಧ ವಿಷಯಗಳು ಹರಿದಾಡುತ್ತಿವೆ. ಆದರೆ ನಾವು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಬಯಸುತ್ತೇವೆ. ಪ್ರಧಾನಿ ಮತ್ತು 'ಚಾಣಕ್ಯ' ಎಂದು ಕರೆಯಲ್ಪಡುವವರು ಹಿಮಾಚಲದಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಾಂಗ್ರೆಸ್ ನಾಯಕತ್ವದ ಮಧ್ಯಸ್ಥಿಕೆ ಮತ್ತು ತ್ವರಿತಗತಿಯ ನಂತರ ಅಲ್ಲಿನ ಪರಿಸ್ಥಿತಿ ಸಂಪೂರ್ಣವಾಗಿ ಕಾಂಗ್ರೆಸ್‌ನ ಹಿಡಿತದಲ್ಲಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಫೋಸ್ಟ್ ಮಾಡಿದ್ದಾರೆ.

"ಇತರ ಹಲವಾರು ರಾಜ್ಯಗಳಂತೆ, ಬಿಜೆಪಿಯು ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತದೊಂದಿಗೆ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹಣಬಲ, ಭುಜಬಲದದಿಂದ ಆಟವನ್ನು ಪ್ರಾರಂಭಿಸಿತ್ತು.

ಆದರೆ ಹಿಮಾಚಲ ಪ್ರದೇಶದ ಜನರ ಆಶೀರ್ವಾದ ಕಾಂಗ್ರೆಸ್‌ಗೆ ಇರುವುದರಿಂದ ಅವರು ವಿಫಲರಾಗಿದ್ದಾರೆ. ಈ ಘಟನೆಯ ನಂತರ ನಮ್ಮ ಸಂಕಲ್ಪ ಬಲಗೊಂಡಿದೆ. ನಾವು ಹಿಮಾಚಲ ಪ್ರದೇಶದ ಜನರ ಸೇವೆಯನ್ನು ಮುಂದುವರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್ ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ಸಿದ್ಧಪಡಿಸಿದರು.

ಬಿಕ್ಕಟ್ಟಿನ ಮಧ್ಯೆ, ಸುಖ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲು ಕಾಂಗ್ರೆಸ್‌ನೊಳಗಿನ ಒಂದು ವರ್ಗದ ಬೇಡಿಕೆ ಇದ್ದರೂ ಸಹ, ಹಲವಾರು ಕಾಂಗ್ರೆಸ್ ಶಾಸಕರು ಗುರುವಾರ ಸುಖ್ವಿಂದರ್ ಸಿಂಗ್ ಸುಖು ಅವರ ಮನೆಯಲ್ಲಿ ಭೇಟಿಯಾದರು. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಶಾಸಕರನ್ನು ಹೊಂದಿದ್ದರೆ, ಬಿಜೆಪಿ 25 ಶಾಸಕರನ್ನು ಹೊಂದಿದೆ. ಉಳಿದ ಮೂರು ಸ್ಥಾನಗಳನ್ನು ಸ್ವತಂತ್ರರು ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com