ಕೋರ್ಟ್ ಒಪ್ಪಿಗೆ ಇಲ್ಲದೆ ಡೇರಾ ಮುಖ್ಯಸ್ಥನಿಗೆ ಪೆರೋಲ್ ನೀಡಬೇಡಿ: ಹರಿಯಾಣ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಅನುಮತಿಯಿಲ್ಲದೆ ಮತ್ತೆ ಪೆರೋಲ್ ನೀಡಬಾರದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗುರುವಾರ ಹರಿಯಾಣ ಸರ್ಕಾರಕ್ಕೆ ಸೂಚಿಸಿದೆ.
ಗುರ್ಮೀತ್ ರಾಮ್ ರಹೀಮ್ ಸಿಂಗ್
ಗುರ್ಮೀತ್ ರಾಮ್ ರಹೀಮ್ ಸಿಂಗ್

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಅನುಮತಿಯಿಲ್ಲದೆ ಮತ್ತೆ ಪೆರೋಲ್ ನೀಡಬಾರದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗುರುವಾರ ಹರಿಯಾಣ ಸರ್ಕಾರಕ್ಕೆ ಸೂಚಿಸಿದೆ.

ಡೇರಾ ಸಚ್ಚಾ ಸೌದಾ ಮುಖ್ಯಸ್ಥನಿಗೆ ಮೂರನೇ ಬಾರಿ ಪೆರೋಲ್ ನೀಡಿರುವುದನ್ನು ಪ್ರಶ್ನಿಸಿ ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರ ಪೀಠ ಈ ಆದೇಶ ನೀಡಿದೆ.

ಜನವರಿ 19 ರಂದು ಗುರ್ಮೀತ್ ಸಿಂಗ್ ಅವರಿಗೆ 50 ದಿನಗಳ ಪೆರೋಲ್ ನೀಡಲಾಗಿತ್ತು.

ಗುರ್ಮೀತ್ ರಾಮ್ ರಹೀಮ್ ಸಿಂಗ್
ರಾಮ್ ರಹೀಮ್ ಸರಣಿ ಹಂತಕ ಅಲ್ಲ: ಡೇರಾ ಮುಖ್ಯಸ್ಥನಿಗೆ ಪೆರೋಲ್ ಸಮರ್ಥಿಸಿಕೊಂಡ ಹರಿಯಾಣ ಸರ್ಕಾರ

ಕಳೆದ ವರ್ಷ ನವೆಂಬರ್ 21 ರಂದು ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಎರಡು ತಿಂಗಳ ನಂತರ ಅವರಿಗೆ ಮತ್ತೆ 21 ದಿನಗಳ ಪೆರೋಲ್ ನೀಡಲಾಗಿತ್ತು.

ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಅಲ್ಲದೆ ಎರಡು ಕೊಲೆ ಪ್ರಕರಣಗಳಲ್ಲೂ ರಾಮ್ ರಹೀಮ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com