ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗುಜರಾತ್ ಹೈಕೋರ್ಟ್ ಆದೇಶದ ನಂತರ ಕ್ಯಾಡಿಲಾ ಫಾರ್ಮಾ ಸಿಎಂಡಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಕಾಡಿಲಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಬಲ್ಗೇರಿಯನ್ ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ ಆರೋಪದ ಮೇಲೆ ಕಂಪನಿಯ ಅಧ್ಯಕ್ಷ ಮತ್ತು...

ಅಹಮದಾಬಾದ್: ಕಾಡಿಲಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಬಲ್ಗೇರಿಯನ್ ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ ಆರೋಪದ ಮೇಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪೊಲೀಸರು ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯಕ್ಕೆ ಈ ಕುರಿತು ತನಿಖೆ ನಡೆಸಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್ ಮೂಲದ ಫಾರ್ಮಾ ಕಂಪನಿಯ ಸಿಎಂಡಿ ವಿರುದ್ಧ ಭಾನುವಾರ ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 376 (ಅತ್ಯಾಚಾರ), 354 (ಹಲ್ಲೆ ಅಥವಾ ಕ್ರಿಮಿನಲ್ ಬಲ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಎಚ್‌ಎಂ ಕಾನ್ಸಾಗ್ರಾ ಅವರು ಹೇಳಿದ್ದಾರೆ.

ಡಿಸೆಂಬರ್ 22 ರಂದು ಗುಜರಾತ್ ಹೈಕೋರ್ಟ್ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ ನಂತರ ಕಂಪನಿಯ ಸಿಎಂಡಿ ಮತ್ತು ಕಂಪನಿಯ ಉದ್ಯೋಗಿಯೊಬ್ಬರ ವಿರುದ್ಧ ನಗರದ ಸೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಾನ್ಸಾಗ್ರಾ ತಿಳಿಸಿದ್ದಾರೆ.

"ಗುಜರಾತ್ ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಿ, ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ನಾವು ಕ್ಯಾಡಿಲಾ ಫಾರ್ಮಾ ಸಿಎಂಡಿ ರಾಜೀವ್ ಮೋದಿ ಮತ್ತು ಜಾನ್ಸನ್ ಮ್ಯಾಥ್ಯೂ ಎಂಬ ಉದ್ಯೋಗಿಯ ವಿರುದ್ಧ ಕೇಸ್ ದಾಖಲಿಸಿದ್ದೇವೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸಿಆರ್‌ಪಿಸಿ(ಅಪರಾಧ ಪ್ರಕ್ರಿಯಾ ಸಂಹಿತೆ) ಅಡಿಯಲ್ಲಿ ಪೊಲೀಸ್ ತನಿಖೆಗೆ ನ್ಯಾಯಾಲಯವು ನಿರ್ದೇಶನ ನೀಡಿದ ನಂತರ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಲವಿನಾ ಸಿನ್ಹಾ ಅವರು ತಿಳಿಸಿದ್ದಾರೆ.

ರಾಜೀವ್ ಮೋದಿ ವಿರುದ್ಧ ಅತ್ಯಾಚಾರ, ಹಲ್ಲೆ, ಬೆದರಿಕೆ ಮತ್ತು ಮಾನವ ಕಳ್ಳಸಾಗಣೆ ಸೇರಿದಂತೆ ಇತರ ಆರೋಪಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಮತ್ತು ತನ್ನ ದೂರಿನ ಮೇಲೆ ಪ್ರಕರಣ ದಾಖಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಬಲ್ಗೇರಿಯಾದ ಮಹಿಳೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com