ಮಧ್ಯಪ್ರದೇಶ: ಪತಿ, ಮಾವನನ್ನು ಗುಂಡಿಕ್ಕಿ ಕೊಂದ ಮಹಿಳೆ!

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಜ್ಜಯನಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಇಂಗೋರಿಯಾದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತರನ್ನು ಆರೋಪಿ ಸವಿತಾ ಅವರ ಪತಿ ರಾಧೇಶ್ಯಾಮ್ (41), ಮತ್ತು ಆಕೆಯ ಸೋದರ ಮಾವ ಧೀರಜ್ (47) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

"ರಾಧೇಶ್ಯಾಮ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಧೀರಜ್ ಬದ್‌ನಗರ ಆಸ್ಪತ್ರೆಯಲ್ಲಿ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ನಂತರ ಆರೋಪಿ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಇಂಗೋರಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಿಕಾ ಸಿಂಗ್ ಯಾದವ್ ಹೇಳಿದರು. 

ಅಂಗನವಾಡಿ ಕಾರ್ಯಕರ್ತೆಯಾಗಿರುವ ಸವಿತಾ (35) ಮೊದಲು ತನ್ನ ಪತಿಗೆ ನಂತರ ತನ್ನ ಸೋದರಮಾವನಿಗೆ ಗುಂಡು ಹಾರಿಸಿದ್ದಾಳೆ. ಮೇಲ್ನೋಟಕ್ಕೆ ಇದು ಆಸ್ತಿ ವಿವಾದದ ಕಾರಣ ಎಂದು ತೋರುತ್ತದೆ ಎಂದು ಯಾದವ್ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com