ಬಿಹಾರ ಜಾತಿ ಸಮೀಕ್ಷೆ ಪ್ರಕರಣ: ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಜಾತಿ ಸಮೀಕ್ಷೆ ಮತ್ತು ಪಾಟ್ನಾ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬಿಹಾರ ಸರ್ಕಾರದ ಆದೇಶಕ್ಕೆ ತಡೆ ನೀಡಲು ಮಂಗಳವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಜಾತಿ ಸಮೀಕ್ಷೆ ಮತ್ತು ಪಾಟ್ನಾ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬಿಹಾರ ಸರ್ಕಾರದ ಆದೇಶಕ್ಕೆ ತಡೆ ನೀಡಲು ಮಂಗಳವಾರ ನಿರಾಕರಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠ, ಆ ನೊಂದ ಅರ್ಜಿದಾರರು ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಜಾತಿ ಸಮೀಕ್ಷೆಯ ದತ್ತಾಂಶ ಮತ್ತು ಸಂಶೋಧನೆಗಳನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಹಾಕುವಂತೆ ಬಿಹಾರ ಸರ್ಕಾರಕ್ಕೆ ಸೂಚಿಸಿದೆ.

"ಕ್ಷಮಿಸಿ, ರಾಜ್ಯ ಸರ್ಕಾರದ ಪರವಾಗಿ ಹೈಕೋರ್ಟ್ ಆದೇಶ ನೀಡಿರುವುದರಿಂದ ಯಾವುದೇ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಮುಂದಿನ ವಿಚಾರಣೆಯನ್ನು ಜನವರಿ 29 ಕ್ಕೆ ನಿಗದಿಪಡಿಸಿದೆ.

ಹೈಕೋರ್ಟ್ ತೀರ್ಪು ಸರಿಯಾಗಿದೆಯೇ ಮತ್ತು ಬಿಹಾರ ಸರ್ಕಾರದ ಜಾತಿ ಸಮೀಕ್ಷೆಯ ಕಾನೂನುಬದ್ಧತೆಯನ್ನು ನಂತರ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಎನ್‌ಜಿಒ, ಏಕ್ ಸೋಚ್ ಏಕ್ ಪ್ರಯಾಸ್ ಮತ್ತು ಯೂತ್ ಫಾರ್ ಇಕ್ವಾಲಿಟಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿತ್ತು. ನಂತರ ಬಿಹಾರ ಸರ್ಕಾರದ ಆದೇಶ ಎತ್ತಿಹಿಡಿದ ಪಾಟ್ನಾ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com