ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್: ಪತಿ ವಿರುದ್ಧ ಪ್ರಕರಣ ದಾಖಲು

ಮಧ್ಯಪ್ರದೇಶ: ಇಂದೋರ್‌ನಲ್ಲಿ ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಧ್ಯಪ್ರದೇಶ: ಇಂದೋರ್‌ನಲ್ಲಿ ವಾಟ್ಸಾಪ್‌ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

23 ವರ್ಷದ ಪತ್ನಿ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ರಾವೋಜಿ ಬಜಾರ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮ್ ಕುಮಾರ್ ರಘುವಂಶಿ ತಿಳಿಸಿದ್ದಾರೆ.

ದಂಪತಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಗಳಿದ್ದಾಳೆ. ಆದರೆ ಇದುವರೆಗೆ ಯಾರ ಬಂಧನವೂ ಆಗಿಲ್ಲ. ಮದುವೆಯಾದ ಮೂರು ತಿಂಗಳ ನಂತರ ಪತಿ ತನಗೆ ಕಿರುಕುಳ ನೀಡಲಾರಂಭಿಸಿದ ಮತ್ತು ಗರ್ಭಿಣಿಯಾದಾಗ ತನ್ನ ಚಾರಿತ್ರ್ಯ ಹರಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಯುವಕ ಡಿಸೆಂಬರ್ 18 ರಂದು  ತನ್ನ ಹೆಂಡತಿಗೆ ವಾಟ್ಸಾಪ್‌ನಲ್ಲಿ ವಾಯ್ಸ್ ನೋಟ್ ಕಳುಹಿಸಿದ್ದು, ಮೂರು ಬಾರಿ ತಲಾಖ್ ಹೇಳಿದ್ದಾನೆ ಎಂದು ಅವರು ಹೇಳಿದರು.ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆ 2019 ತ್ವರಿತ ತ್ರಿವಳಿ ತಲಾಖ್ ಮೂಲಕ ವೈವಾಹಿಕ ಸಂಬಂಧಗಳನ್ನು ಕೊನೆಗೊಳಿಸುವ ಪದ್ಧತಿಯನ್ನು ನಿಷೇಧಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com