ಲೋಕಸಭೆ, ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಜನವರಿ 4ರಂದು ಜಗನ್ ಸಹೋದರಿ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶರ್ಮಿಳಾ
ಶರ್ಮಿಳಾ

ತೆಲಂಗಾಣ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಶೇಷವೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದ ಒಂದು ತಿಂಗಳ ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಇದೇ ವರ್ಷ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾಗೆ ಕಾಂಗ್ರೆಸ್ ದೊಡ್ಡ ಪಾತ್ರವನ್ನು ನೀಡಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ, 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ಸಹ ವಹಿಸಬಹುದು. ವಾಸ್ತವವಾಗಿ, ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷವನ್ನು ಅಂದರೆ ವೈಎಸ್‌ಆರ್‌ಸಿಪಿಯನ್ನು ತೊರೆಯಲು ಬಯಸುವವರು ಕಾಂಗ್ರೆಸ್‌ಗೆ ಸೇರಬಹುದು ಎಂದು ಪಕ್ಷವು ಆಶಿಸುತ್ತಿದೆ.

2021ರಲ್ಲೇ ಶರ್ಮಿಳಾ ತನ್ನ ಸಹೋದರನೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಹೊಂದಿರುವುದಾಗಿ ಸ್ಪಷ್ಟಪಡಿಸಿದ್ದರು. ತೆಲಂಗಾಣದಲ್ಲಿ ವೈಎಸ್‌ಆರ್‌ಸಿಪಿಗೆ ಅಸ್ತಿತ್ವವಿಲ್ಲ ಎಂದು ಅವರು ಹೇಳಿದ್ದರು. ಜುಲೈನಲ್ಲಿ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿದ್ದರು. ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆಯೂ ಶರ್ಮಿಳಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಥಿತಿ ಉತ್ತಮವಾಗಿದ್ದು, ಅದನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದು ಹೇಳಿದರು.

ಶರ್ಮಿಳಾ ಅವರ ಸೇರ್ಪಡೆಯು ಪಕ್ಷದ ಪುನಶ್ಚೇತನಕ್ಕೆ ನೆರವಾಗಲಿದೆ ಎಂದು ಆಂಧ್ರಪ್ರದೇಶದ ನಾಯಕರು ಹೈಕಮಾಂಡ್‌ಗೆ ತಿಳಿಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಶೇ 90ರಷ್ಟು ನಾಯಕರು ಶರ್ಮಿಳಾ ಸೇರ್ಪಡೆ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com