ಕಾಶ್ಮೀರ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ LOC ಬಳಿ ಇರುವ ಎರಡು ಹಳ್ಳಿಗಳಿಗೆ ಈಗ ವಿದ್ಯುತ್ ಭಾಗ್ಯ!

ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಕೆರಾನ್ ವಲಯದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಎರಡು ದೂರದ ಹಳ್ಳಿಗಳಿಗೆ ಬುಧವಾರ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಕೆರಾನ್ ವಲಯದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಎರಡು ದೂರದ ಹಳ್ಳಿಗಳಿಗೆ ಬುಧವಾರ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.

"ಕುಪ್ವಾರ ಜಿಲ್ಲೆಯ ಕೆರಾನ್ ಪ್ರದೇಶದ ಕುಂಡಿಯಾನ್ ಮತ್ತು ಪತ್ರೂ ಗ್ರಾಮಗಳ ನಿವಾಸಿಗಳು 75 ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯುತ್ ಬೆಳಕಿನ ಸಂತೋಷವನ್ನು ಅನುಭವಿಸಿದ್ದು, ಐತಿಹಾಸಿಕ ಕ್ಷಣ" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಸಮೃದ್ಧ್ ಸೀಮಾ ಯೋಜನೆ ಅಡಿಯಲ್ಲಿ ಸ್ಥಾಪಿಸಲಾದ ಎರಡು 250-ಕೆವಿ ಉಪ-ಕೇಂದ್ರಗಳನ್ನು ಕಾಶ್ಮೀರ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಅವರು ಇಂದು ಉದ್ಘಾಟಿಸಿದರು.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಆಡಳಿತಕ್ಕೆ ಎರಡು ಗ್ರಾಮಗಳ ನಿವಾಸಿಗಳು ಕೃತಜ್ಞತೆ ಸಲ್ಲಿಸಿದರು ಎಂದು ವಕ್ತಾರರು ಹೇಳಿದ್ದಾರೆ.

"ಎರಡು ಗ್ರಾಮಗಳ ನಿವಾಸಿಗಳ ಮನೆಗಳಲ್ಲಿ ವಿದ್ಯುತ್ ದೀಪಗಳು ಬೆಳಗುತ್ತಿದ್ದಂತೆ ಹರ್ಷೋದ್ಗಾರ ವ್ಯಕ್ತಪಡಿಸಿದರು. ಇದು ದಶಕಗಳ ಕಾಲ ಕಾಯುವಿಕೆಯ ಅಂತ್ಯವನ್ನು ಸೂಚಿಸುತ್ತದೆ" ಎಂದು ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com