ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಆರೋಪಿ ನೀಲಂ ಆಜಾದ್, ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಆರೋಪಿ ನೀಲಂ ಆಜಾದ್, ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ

ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ನೇತೃತ್ವದ ಪೀಠವು ಅರ್ಜಿಯನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

'ಅರ್ಜಿದಾರರು ಈಗಾಗಲೇ ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಮತ್ತು ಅದರ ಪ್ರಕಾರ ವಜಾಗೊಳಿಸಲಾಗಿದೆ' ಎಂದು ನ್ಯಾಯಮೂರ್ತಿ ಮನೋಜ್ ಜೈನ್ ಅವರನ್ನೊಒಳಗೊಂಡ ಪೀಠ ಹೇಳಿದೆ.

ವಿಚಾರಣಾ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಆಕೆಯನ್ನು ಸಮರ್ಥಿಸಿಕೊಳ್ಳಲು ಅವರ ಆಯ್ಕೆಯ ವಕೀಲರನ್ನು ಸಂಪರ್ಕಿಸಲು ಆಕೆಗೆ ಅವಕಾಶವಿಲ್ಲದ ಕಾರಣ ಪೊಲೀಸ್ ಕಸ್ಟಡಿಯು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ನೀಲಂ ಆಜಾದ್ ಅವರ ವಕೀಲರು ವಾದಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಆಕೆಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಆಜಾದ್ ತನ್ನ ಆಯ್ಕೆಯ ವಕೀಲರನ್ನು ಸಂಪರ್ಕಿಸಲು ಅವಕಾಶ ನೀಡದಿರುವುದು ಆಕೆಯ ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ರಿಮಾಂಡ್ ಆದೇಶವನ್ನು ಕಾನೂನುಬಾಹಿರವಾಗಿಸುತ್ತದೆ ಎಂದು ಆಕೆಯ ಅರ್ಜಿಯಲ್ಲಿ ದೂರಲಾಗಿದೆ.
ವಿಚಾರಣಾ ನ್ಯಾಯಾಲಯ ಆಕೆಯನ್ನು ಜನವರಿ 5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಡಿಸೆಂಬರ್ 21 ರಂದು, ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾದ ನೀಲಂ ಆಜಾದ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ವಿಚಾರಣಾ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿತು. ಪಿತೂರಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಬಹಿರಂಗಪಡಿಸಬೇಕಾಗಿದೆ ಎಂದು ದೆಹಲಿ ಪೊಲೀಸರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com