ನ್ಯಾಯಾಲಯದಲ್ಲಿ ಸರ್ಕಾರಿ ಅಧಿಕಾರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪ್ರಕಟ

ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್‌ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್‌ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಖುದ್ದು ಹಾಜರಾತಿಗೆ ನ್ಯಾಯಾಲಯಗಳು ಸೂಚಿಸಬೇಕು ಆದರೆ, ಮೊದಲ ಆಯ್ಕೆಯಾಗಿ 24 ಗಂಟೆಗಳ ಮೊದಲು ಅಧಿಕಾರಿಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಲಿಂಕ್ ನೀಡಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಹೇಳಿತು.

"ಅಫಿಡವಿಟ್‌ನಲ್ಲಿನ ಅಧಿಕಾರಿಯ ನಿಲುವು ನ್ಯಾಯಾಲಯದ ದೃಷ್ಟಿಕೋನದಿಂದ ಭಿನ್ನವಾಗಿದೆ ಎಂಬ ಕಾರಣಕ್ಕಾಗಿ ನ್ಯಾಯಾಲಯವು ಅಧಿಕಾರಿಯ ಉಪಸ್ಥಿತಿಯನ್ನು ನಿರ್ದೇಶಿಸಬಾರದು. ಅಂತಹ ಸಂದರ್ಭಗಳಲ್ಲಿ ಅಸ್ತಿತ್ವದಲ್ಲಿರುವ ದಾಖಲೆಗಳ ಆಧಾರದ ಮೇಲೆ ವಿಷಯವನ್ನು ಪರಿಹರಿಸಬಹುದಾದರೆ, ಅದಕ್ಕನುಗುಣವಾಗಿ ಅರ್ಹತೆಯ ಮೇಲೆ ಅದನ್ನು ನಿರ್ಧರಿಸಬೇಕು ಪೀಠ ಹೇಳಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಇಬ್ಬರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಕರೆಸುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಮಾರ್ಗಸೂಚಿಗಳನ್ನು ನೀಡಿದೆ.

ಎಲ್ಲಾ ರಾಜ್ಯ ಹೈಕೋರ್ಟ್‌ಗಳು ತನ್ನ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡ ನಂತರ ಸರ್ಕಾರಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಲು ನಿಯಮಗಳನ್ನು ರೂಪಿಸುವುದನ್ನು ಪರಿಗಣಿಸಬೇಕು ಎಂದು ಪೀಠ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com