ಕಚ್ಚಾ ತೈಲ ಬೆಲೆ ಇಳಿಕೆಯಾದರೂ ಮೋದಿ ಸರ್ಕಾರದ ಲೂಟಿಗೆ ನಿಯಂತ್ರಣವಿಲ್ಲದಂತಾಗಿದೆ: ಮಲ್ಲಿಕಾರ್ಜುನ ಖರ್ಗೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 19 ತಿಂಗಳಲ್ಲಿ ಕಚ್ಚಾ ತೈಲ ಬೆಲೆಯು ಶೇ 31 ರಷ್ಟು ಕಡಿಮೆಯಾಗಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಸಚಿವರು ಹೇಳುತ್ತಾರೆ ಎಂದು ದೂರಿದ್ದಾರೆ. 

'ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದೆ. ಆದರೆ, ಮೋದಿ ಸರ್ಕಾರದ ಲೂಟಿಗೆ ಯಾವುದೇ ನಿಯಂತ್ರಣವಿಲ್ಲದಂತಾಗಿದೆ. 'ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ಬಗ್ಗೆ ತೈಲ ಕಂಪನಿಗಳೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ' ಎಂದು ಮೋದಿ ಜಿ ಅವರ ಸಚಿವರು ಹೇಳುತ್ತಿದ್ದಾರೆ' ಎಂದು ದೂರಿದ್ದಾರೆ.

'ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸಾರ್ವಜನಿಕರಿಂದ 8 ರಿಂದ 10 ರೂ. ಮತ್ತು ಡೀಸೆಲ್ ಮೇಲೆ 3 ರಿಂದ 4 ರೂ. ಲಾಭ ಗಳಿಸುತ್ತಿವೆ' ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

'ದೇಶವು 50 ವರ್ಷಗಳಲ್ಲಿ ಅತ್ಯಂತ ಕಡಿಮೆ 'ಸಾರ್ವಜನಿಕ ಉಳಿತಾಯ' ಖಾತೆಯನ್ನು ಕಾಣುವಂತಾಗಿದ್ದು, ಬಿಜೆಪಿಯ ಸುಳ್ಳು ಭಾಷಣಗಳಲ್ಲಿ ಮತ್ತು ಅವರ ಪೊಳ್ಳು ಜಾಹೀರಾತುಗಳಲ್ಲಿ ಮಾತ್ರ 'ಅಚ್ಛೇ ದಿನ್' ಕಾಣಿಸುತ್ತಿದೆ' ಎಂದು ಖರ್ಗೆ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com