ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯೆ

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ
ಕೊಲೆಯಾದ ದಿವ್ಯಾ ಪಹುಜಾ
ಕೊಲೆಯಾದ ದಿವ್ಯಾ ಪಹುಜಾ
Updated on: 

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.

ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com