ದೆಹಲಿ: ಏಮ್ಸ್ ನಿರ್ದೇಶಕರ ಕಚೇರಿಯಲ್ಲಿ ಅಗ್ನಿ ಅವಘಡ, 7 ಅಗ್ನಿಶಾಮಕ ವಾಹನಗಳಿಂದ ರಕ್ಷಣಾ ಕಾರ್ಯಾಚರಣೆ

ದೆಹಲಿಯ ಏಮ್ಸ್‌ನ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಏಮ್ಸ್.
ಏಮ್ಸ್.

ನವದೆಹಲಿ: ದೆಹಲಿಯ ಏಮ್ಸ್‌ನ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ಎಐಐಎಂಎಸ್ ನಿರ್ದೇಶಕರ ಕಚೇರಿಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿವೆ.

ಇಂದು (ಗುರುವಾರ) ಬೆಳಗ್ಗೆ 5:58 ರ ಸುಮಾರಿಗೆ ಏಮ್ಸ್ ಆಸ್ಪತ್ರೆಯಿಂದ ಬೆಂಕಿಯ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿರ್ದೇಶಕರ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿದ್ದ ದಾಖಲೆಗಳು, ಪೀಠೋಪಕರಣಗಳು ಮತ್ತು ರೆಫ್ರಿಜರೇಟರ್‌ ನಾಶವಾಗಿವೆ ಎಂದು ವರದಿಗಳು ತಿಳಿಸಿವೆ.

ಈ ಅಗ್ನಿ ಅವಘಡದಲ್ಲಿ ಯಾವುದೇ ರೀತಿಯ ಅನಾಹುತ, ಸಾವು-ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com