ಮುಸ್ಲಿಮರ ಹೆಸರಿನಲ್ಲಿ ರಾಮ ಮಂದಿರ, ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ: ಇಬ್ಬರ ಬಂಧನ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.
 
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಲಖನೌ ನ ಗೋಮ್ತಿ ನಗರ್ ನ ವಿಭೂತಿ ಖಂಡ್ ನಲ್ಲಿ ಬಂಧಿಸಲಾಗಿದೆ.
 
ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. '@iDevendraOffice ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ  ಬೆದರಿಕೆ ಹಾಕಿದ್ದರು.

'alamansarikhan608@gmail.com' ಮತ್ತು 'zubairkhanisi199@gmail.com' ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಸ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.

ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ  ಎಂಬ ಮಾಹಿತಿ ಬಹಿರಂಗವಾಗಿದೆ. 

ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ಅದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com