ರಾಜ್ಯಸಭೆಗೆ ಆಮ್ ಆದ್ಮಿ ಪಕ್ಷದಿಂದ ಸ್ವಾತಿ ಮಾಲಿವಾಲ್; ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಲಿರುವ ಸಂಜಯ್ ಸಿಂಗ್!

ದೆಹಲಿಯಲ್ಲಿ ರಾಜ್ಯಸಭೆಗೆ ಜ.19 ರಂದು ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 
ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಾಲಿವಾಲ್
ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಾಲಿವಾಲ್

ದೆಹಲಿ: ದೆಹಲಿಯಲ್ಲಿ ರಾಜ್ಯಸಭೆಗೆ ಜ.19 ರಂದು ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 

ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರನ್ನು ಆಮ್ ಆದ್ಮಿ ಪಕ್ಷ ರಾಜ್ಯಸಭೆಗೆ ಅಂತಿಮಗೊಳಿಸಿದೆ. ಈಗಾಗಲೇ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಮತ್ತೆ ರಾಜ್ಯಸಭೆಗೆ ಕಳಿಸಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದ್ದು ಆಪ್ ನಿಂದ ಎನ್ ಡಿ ಗುಪ್ತಾ 2 ನೇ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ. 

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಮಿತಿ ಸಭೆ ನಡೆದಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಹಾಲಿ ಸದಸ್ಯ ಸುಶೀಲ್ ಕುಮಾರ್ ಗುಪ್ತಾ ಹರ್ಯಾಣದ ಚುನಾವಣಾ ರಾಜಕಾರಣದತ್ತ ಹೆಚ್ಚಿನ ಗಮನ ಕೇಂದ್ರೀಕರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 

"ಸುಶೀಲ್ ಕುಮಾರ್ ಗುಪ್ತಾ ಅವರು ಹರಿಯಾಣದ ರೋಮಾಂಚಕ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ತಮ್ಮ ಆಕಾಂಕ್ಷೆಯನ್ನು ತಿಳಿಸಿದ್ದಾರೆ ಮತ್ತು ಈ ಮಾರ್ಗವನ್ನು ಅನುಸರಿಸುವ ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ" ಎಂದು ಎಎಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ರಾಜ್ಯಸಭೆ ಮರುನಾಮಕರಣಕ್ಕಾಗಿ ದಾಖಲೆಗಳಿಗೆ ಸಹಿ ಹಾಕಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com