ಸೊಮಾಲಿಯಾ: 15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.
ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ.
ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ನೌಕಾಪಡೆ ತಿಳಿಸಿದೆ.
ಇಂದು (ಜ.5) ಯುದ್ಧ ನೌಕೆಯು ಹಡಗಿನ ಮೇಲೆ ಹಾರಿದ್ದು, ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಹಡಗಿನ ಸಿಬ್ಬಂದಿ ಜೊತೆ ಸಂಪರ್ಕ ಸಾಧಿಸಿದೆ. ನೌಕಾಪಡೆಯ ವಿಮಾನವು ಹಡಗಿನ ಚಲನೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಭಾರತೀಯ ಯುದ್ಧನೌಕೆ INS ಚೆನ್ನೈ ನೆರವು ನೀಡಲು ಸಜ್ಜಾಗಿದೆ ಎಂದು ಹೇಳಿದೆ.
ಅಪಹರಣಗೊಂಡ ಹಡಗಿನಲ್ಲಿ ಭಾರತೀಯರೂ ಇದ್ದು, ಸಿಬ್ಬಂದಿಯ ಜೊತೆ ಸಂವಹನ ನಡೆಸಲಾಗುತ್ತಿದೆʼ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಸೇನಾ ಅಧಿಕಾರಿಗಳ ಪ್ರಕಾರ ಸೋಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭ್ಯವಾಗಿದ್ದು ಸದ್ಯ ಭಾರತೀಯ ನೌಕಾಪಡೆಯು ವಿಮಾನವು ಹಡಗಿನ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.
Advertisement