ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮೊಮ್ಮಗನ ಬಾರಾಮತಿ ಕಂಪನಿ ಮೇಲೆ ಇಡಿ ದಾಳಿ

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮೊಮ್ಮಗ, ಶಾಸಕ ರೋಹಿತ್ ಪವಾರ್...
ಶರದ್ ಪವಾರ್
ಶರದ್ ಪವಾರ್

ಮುಂಬೈ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮೊಮ್ಮಗ, ಶಾಸಕ ರೋಹಿತ್ ಪವಾರ್ ಒಡೆತನದ ಬಾರಾಮತಿ ಆಗ್ರೋ ಕಂಪನಿ ಮೇಲೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಬಾರಾಮತಿ, ಪುಣೆ, ಔರಂಗಾಬಾದ್ ಮತ್ತು ಅಮರಾವತಿಯಲ್ಲಿ ಕನಿಷ್ಠ ಆರು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾರಾಮತಿ ಪಟ್ಟಣದಲ್ಲಿರುವ ಬಾರಾಮತಿ ಆಗ್ರೋ ಕಚೇರಿಯನ್ನೂ ಇಡಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ ಸಹಕಾರಿ ವಲಯದ ಸಕ್ಕರೆ ಕಾರ್ಖಾನೆಗಳನ್ನು ಮೋಸದ ಮಾರ್ಗಗಳ ಮೂಲಕ ಮಾರಾಟ ಮಾಡಲಾಗುತ್ತಿದೆ ಮತ್ತು ಅವುಗಳನ್ನು ಕೇಳಿದ ಬೆಲೆಗೆ ಮಾರಾಟ ಮಾಡಲಾಗಿದೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com