ಮಥುರಾ ಕೃಷ್ಣ ಜನ್ಮಭೂಮಿ ವಿವಾದ: ಪಿಐಎಲ್ ವಜಾ, ಅಲಹಾಬಾದ್ ಹೈಕೋರ್ಟ್ ತೀರ್ಪು ಮಧ್ಯ ಪ್ರವೇಶಕ್ಕೆ 'ಸುಪ್ರೀಂ' ನಕಾರ

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ದೇವಸ್ಥಾನ
ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ದೇವಸ್ಥಾನ

ನವದೆಹಲಿ: ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಸ್ವಾಧೀನಪಡಿಸಿಕೊಂಡು ಶ್ರೀಕೃಷ್ಣನನ್ನು ಪೂಜಿಸಲು ಹಿಂದೂಗಳಿಗೆ ಹಸ್ತಾಂತರಿಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಅಲಹಾಬಾದ್ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ವಕೀಲ ಮಹೇಕ್ ಮಹೇಶ್ವರಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 12, 2023 ರಂದು ತನ್ನ ವಿವರವಾದ ಆದೇಶದಲ್ಲಿ, ಮಥುರಾದ ಶಾಹಿ ಈದ್ಗಾ ಮಸೀದಿ ಸ್ಥಳವನ್ನು ಕೃಷ್ಣನ ಜನ್ಮಸ್ಥಳವೆಂದು ಗುರುತಿಸಲು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತ್ತು. 

ಮಹೇಶ್ವರಿ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಅದರಲ್ಲಿ ಪ್ರಸ್ತಾಪಿಸಲಾದ ಹಲವಾರು ಸಿವಿಲ್ ಮೊಕದ್ದಮೆಗಳು ಈಗಾಗಲೇ ಇತ್ಯರ್ಥಕ್ಕೆ ಬಾಕಿ ಉಳಿದಿವೆ.

"ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ದಾವೆ) ನಿರ್ವಹಿಸುವಂತಿಲ್ಲ, ಏಕೆಂದರೆ ಅದರಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಯಲ್ಲಿ ಹಲವಾರು ಸಿವಿಲ್ ಮೊಕದ್ದಮೆಗಳು ಈಗಾಗಲೇ ವಿಲೇವಾರಿಗೆ ಬಾಕಿ ಉಳಿದಿವೆ. ನಮಗೆ ಬಹುಸಂಖ್ಯೆಯ ದಾವೆಗಳು ಬೇಡ. ನೀವು ಅದನ್ನು ಪಿಐಎಲ್ ಆಗಿ ಸಲ್ಲಿಸಿದ್ದೀರಿ, ಅದಕ್ಕಾಗಿಯೇ ಅದನ್ನು ಹೈಕೋರ್ಟ್ ತಿರಸ್ಕರಿಸಿದೆ ಎಂದು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ಹೇಳಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠವು ಇಂದು ಅಲಹಾಬಾದ್ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

2020 ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದ ವಕೀಲ ಮಹೇಶ್ವರಿ ಅವರೇ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು, ಇದು ಸರಿಯಾದ ಮಸೀದಿ ಅಲ್ಲ ಎಂದು ಅವರು ಪ್ರತಿಪಾದಿಸಿದರು, ಏಕೆಂದರೆ ಪ್ರಶ್ನೆಯಲ್ಲಿರುವ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡು ಮಸೀದಿಯನ್ನು ನಿರ್ಮಿಸಲಾಗಿದೆ.

ಇಸ್ಲಾಮಿಕ್ ನ್ಯಾಯಶಾಸ್ತ್ರದ ಪ್ರಕಾರ, ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ವಾದಿಸಿದ್ದರು. ಮತ್ತೊಂದೆಡೆ, ಹಿಂದೂ ಕಾನೂನು ಮತ್ತು ನ್ಯಾಯಶಾಸ್ತ್ರದ ಪ್ರಕಾರ, ದೇವಾಲಯವು ಪಾಳುಬಿದ್ದಿದ್ದರೂ ಅದು ದೇವಾಲಯವಾಗಿದೆ ಎಂದು ಮಹೇಶ್ವರಿ ಅರ್ಜಿಯಲ್ಲಿ ವಾದಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com