ಉತ್ತರ ಪ್ರದೇಶ: 1 ಲಕ್ಷ ರೂ reward ಹೊಂದಿದ್ದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಎನ್ಕೌಂಟರ್ ನಲ್ಲಿ ಹತ

ಉತ್ತರ ಪ್ರದೇಶದಲ್ಲಿ ಗ್ಯಾಂಗ್ ಸ್ಟರ್ ಗಳ ವಿರುದ್ಧ ಕಾರ್ಯಾಚರಣೆ ಮುಂವರೆದಿದ್ದು, ಇಂದು 1 ಲಕ್ಷ ರೂ reward ಹೊಂದಿದ್ದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎಂಬಾತನನ್ನು ಉತ್ತರ ಪ್ರದೇಶದಲ್ಲಿ ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಗ್ಯಾಂಗ್ ಸ್ಟರ್ ಗಳ ವಿರುದ್ಧ ಕಾರ್ಯಾಚರಣೆ ಮುಂವರೆದಿದ್ದು, ಇಂದು 1 ಲಕ್ಷ ರೂ reward ಹೊಂದಿದ್ದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎಂಬಾತನನ್ನು ಉತ್ತರ ಪ್ರದೇಶದಲ್ಲಿ ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತಿ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಕಾರ್ಯಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಉಪಾಧ್ಯಾಯಗೆ ಬುಲೆಟ್ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ವೇಳೆ ಆತ ಸಾವನ್ನಪ್ಪಿದ್ದಾನೆ ಎಂದು ಎಸ್‌ಟಿಎಫ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ತಿಳಿಸಿದ್ದಾರೆ.

ಪಾತಕಿ ವಿನೋದ್ ಕುಮಾರ್ ಉಪಾಧ್ಯಾಯ ವಿರುದ್ಧ ಗೋರಖ್‌ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಕೊಲೆ, ಸುಲಿಗೆ, ಅಪಹರಣ, ಬೆದರಿಕೆ ಸೇರಿದಂತೆ 35 ಘೋರ ಅಪರಾಧಗಳ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ಗೋರಖ್‌ಪುರ ಪೊಲೀಸರು ಆತನಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com