ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಕೇಸ್ ಪತ್ತೆ, 2 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದ್ದು, ತಮಿಳುನಾಡು ಮತ್ತು ಗುಜರಾತ್‌ನಿಂದ ತಲಾ ಒಬ್ಬರು ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ಡಿಸೆಂಬರ್ 5 ರವರೆಗೆ ಎರಡಂಕಿಯಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಮೂರಂಕಿಗೆ ತಲುಪಿದೆ. ಡಿಸೆಂಬರ್ 31, 2023 ರಂದು ದೇಸದಲ್ಲಿ 841 ಗರಿಷ್ಠ ಪ್ರಕರಣಗಳು ವರದಿಯಾಗಿತ್ತು. ದೇಶದಲ್ಲೆಡೆ ಹವಾಮಾನ ಬದಲಾಗಿದ್ದು, ಶೀತ ವಾತವಾರಣದಿಂದಾಗಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ  4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,387ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,79,804ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com