ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ದಾಖಲಿಸುವಂತೆ ಕೋರ್ಟ್ ಗೆ ದೆಹಲಿ ಪೊಲೀಸರ ಒತ್ತಾಯ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಹೊರಿಸುವಂತೆ ದೆಹಲಿ ಪೊಲೀಸರು ಶನಿವಾರ ಇಲ್ಲಿನ...
ಬ್ರಿಜ್‌ಭೂಷಣ್ ಸಿಂಗ್
ಬ್ರಿಜ್‌ಭೂಷಣ್ ಸಿಂಗ್
Updated on

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಹೊರಿಸುವಂತೆ ದೆಹಲಿ ಪೊಲೀಸರು ಶನಿವಾರ ಇಲ್ಲಿನ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಆಪಾದಿತ ಕೆಲವು ಘಟನೆಗಳು ವಿದೇಶದಲ್ಲಿ ನಡೆದಿರುವುದರಿಂದ, ಅವು ದೆಹಲಿಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವನ್ನು ಪೊಲೀಸರು ವಿರೋಧಿಸಿದ್ದು, ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಆರೋಪ ದಾಖಲಿಸುವ ಕುರಿತು ವಾದ ಮುಕ್ತಾಯಗೊಳಿಸಲಾಗಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪ್ರಿಯಾಂಕಾ ರಜ್‌ಪೂತ್ ಅವರ ಮುಂದೆ ಪೊಲೀಸರು ಮನವಿ ಸಲ್ಲಿಸಿದ್ದು, ದೆಹಲಿ ಸೇರಿದಂತೆ ವಿದೇಶಗಳಲ್ಲಿ ಮತ್ತು ಭಾರತದ ಒಳಗೆ ಸಿಂಗ್ ಅವರು ನಡೆಸಿದ ಲೈಂಗಿಕ ಕಿರುಕುಳದ ಘಟನೆಗಳು ಅದೇ ಅಪರಾಧದ ಭಾಗವಾಗಿವೆ ಎಂದು ಹೇಳಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಲು ದೆಹಲಿ ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಪೊಲೀಸರು ನ್ಯಾಯಾಧೀಶರಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರ ವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಜೂನ್ 15, 2023 ರಂದು ದೆಹಲಿ ಪೊಲೀಸರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com