ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 756 ಹೊಸ ಪ್ರಕರಣ, ಐವರು ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 756 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,049 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಕೊರೋನಾ ವೈರಸ್
ಕೊರೋನಾ ವೈರಸ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 756 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,049 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕರಾ, ಇದೇ ಅವಧಿಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಇಬ್ಬರು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಒಬ್ಬರು ಸೇರಿದಂತೆ ಐವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. 

2023ರ ಡಿಸೆಂಬರ್ 5ರವರೆಗೆ ದೇಶದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿರಲಿಲ್ಲ. ಆದರೆ, ಕೋವಿಡ್ ಹೊಸ ರೂಪಾಂತರ ಜೆಎನ್.1 ಮತ್ತು ಶೀತ ಹವಾಮಾನದ ನಂತರ ಸೋಂಕು ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿವೆ.

2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ಈವರೆಗೆ, 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು 5.3 ಲಕ್ಷಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ದೇಶದಲ್ಲಿ 4.4 ಕೋಟಿಗೂ ಅಧಿಕ ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.

ಸಚಿವಾಲಯದ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‍‌ಗಳನ್ನು ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com