ಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ

ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಚ್ಚಿ: ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರಾದ ದೀಪಕ್ ಕುಮಾರ್ ಸಾಹು ಮತ್ತು ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಇಬ್ಬರು ಶಿಕ್ಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುತ್ತದೆ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಖ್ಯಾತ ಗಾಯಕಿ ನಿಕಿತಾ ಗಾಂಧಿ  ಕುಸಾಟ್‌ನ ಬಯಲು ಸಭಾಂಗಣದಲ್ಲಿ ಸಂಗೀತ ಉತ್ಸವದಲ್ಲಿ ಭಾಗವಹಿಸುವ ಮೊದಲು ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದರು.

ತನಿಖೆಯ ನಂತರ ಮಾಜಿ ಪ್ರಾಂಶುಪಾಲರು ಮತ್ತು ಕೆಲವು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಲೋಪದೋಷಗಳನ್ನು ಉಲ್ಲೇಖಿಸಿ ವಿವರವಾದ ವರದಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ  ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com