ಕಾಂಗ್ರೆಸ್ ಮಾಜಿ ಶಾಸಕನ ರಾಸಲೀಲೆ ವಿಡಿಯೋ ವೈರಲ್, ಪಕ್ಷದಿಂದ ಅಮಾನತು

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ರಾಜಸ್ಥಾನ ಕಾಂಗ್ರೆಸ್ ಅಮಾನತು ಮಾಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶಿಸಿದ್ದಾರೆ. 
ಕಾಂಗ್ರೆಸ್ ಮಾಜಿ ಶಾಸಕ
ಕಾಂಗ್ರೆಸ್ ಮಾಜಿ ಶಾಸಕ
Updated on

ಜೈಪುರ: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ರಾಜಸ್ಥಾನ ಕಾಂಗ್ರೆಸ್ ಅಮಾನತು ಮಾಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶಿಸಿದ್ದಾರೆ. 

ಮೇವಾರಂ ಅವರ ಅನೈತಿಕ ನಡತೆ ಕಾಂಗ್ರೆಸ್‌ನ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ. ಮಹಿಳೆಯು ಆತನ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ದಿನಗಳ ನಂತರ ಜನವರಿ 5 ರಂದು ಮಾಜಿ ಶಾಸಕನ ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.

ಡಿಸೆಂಬರ್ 20 ರಂದು ಜೋಧ್‌ಪುರದಲ್ಲಿ ಮೇವಾರಂ ವಿರುದ್ಧ ಮಹಿಳೆ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. ಮೇವಾರಂ ಶಾಸಕರಾಗಿದ್ದಾಗ ಅವರು ತಮ್ಮ ಪ್ರಭಾವದಿಂದ ಯಾವುದೇ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದರು, ಅಲ್ಲದೇ ತನ್ನ ವಿರುದ್ಧ ಲೈಂಗಿಕ ಚಟುವಟಿಕೆ ಆರೋಪ ಹೊರಿಸಿ ಬಂಧಿಸಲಾಗಿತ್ತು ಎಂದು ಮಹಿಳೆ ಆರೋಪಿಸಿದ್ದಾರೆ.

ಇದೀಗ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಹರಿದಾಡುತ್ತಿದ್ದು, ಇದು ಬಾರ್ಮರ್ ಮಾಜಿ ಶಾಸಕ ಮೇವಾರಂ ಅವರದ್ದು ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮೇವಾರಂ ಅಮಾನತು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com