ಬಾಂಗ್ಲಾದೇಶ ಪ್ರಧಾನಿಯಾಗಿ 4ನೇ ಬಾರಿ ಶೇಖ್ ಹಸೀನಾ ಆಯ್ಕೆ; ಶುಭಾಶಯ ಕೋರಿದ ಪ್ರಧಾನಿ ಮೋದಿ

ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ ಸತತ ನಾಲ್ಕನೇ ಅವಧಿಗೆ ಪ್ರಧಾನಿಯಾದ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಭಿನಂದಿಸಿದ್ದಾರೆ ಮತ್ತು ನೆರೆಯ ದೇಶದೊಂದಿಗೆ...
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ
Updated on

ನವದೆಹಲಿ: ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ ಸತತ ನಾಲ್ಕನೇ ಅವಧಿಗೆ ಪ್ರಧಾನಿಯಾದ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಭಿನಂದಿಸಿದ್ದಾರೆ ಮತ್ತು ನೆರೆಯ ದೇಶದೊಂದಿಗೆ ತನ್ನ ದ್ವಿಪಕ್ಷೀಯ ಸಂಬಂಧವನ್ನ ಇನ್ನಷ್ಟು ಬಲಪಡಿಸಲು ಭಾರತ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

"ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಸಂಸತ್ ಚುನಾವಣೆಯಲ್ಲಿ ಐತಿಹಾಸಿಕ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ ಅವರನ್ನು ಅಭಿನಂದಿಸಿದ್ದೇನೆ" ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

"ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ನಾನು ಬಾಂಗ್ಲಾದೇಶದ ಜನರನ್ನು ಅಭಿನಂದಿಸುತ್ತೇನೆ. ಬಾಂಗ್ಲಾದೇಶದೊಂದಿಗೆ ನಮ್ಮ ನಿರಂತರ ಮತ್ತು ಜನಕೇಂದ್ರಿತ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ" ಎಂದು ಪ್ರಧಾನಿ ಹೇಳಿದ್ದಾರೆ.

ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್ ಚುನಾವಣೆಯಲ್ಲಿ ಶೇಕಡ 50ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಚುನಾವಣಾ ಆಯೋಗದ ವಕ್ತಾರ ಹೇಳಿದ್ದಾರೆ. ಈ ಮೂಲಕ ಶೇಖ್ ಹಸೀನಾ ನಾಲ್ಕನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com