ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ವಿರುದ್ಧ ಟಿಎಂಸಿಯ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪೊಲೀಸ್ ದೂರು ದಾಖಲಿಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಟಿಎಂಸಿ ನಾಯಕ ಸಹಜಹಾನ್ "ಮಮತಾ ಬ್ಯಾನರ್ಜಿಯ ಪೋಷಣೆಯಿಂದಾಗಿ ಕಾನೂನು ಜಾರಿ ಸಂಸ್ಥೆಗಳ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ" ಎಂದು ಮಾಳವೀಯ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಭಟ್ಟಾಚಾರ್ಯ ಅವರು ದೂರು ನೀಡಿದ್ದಾರೆ.
ಸಂದೇಶ್ ಖಾಲಿಯ ಡಾನ್ ಎಂದು ಹೇಳಿಕೊಂಡಿದ್ದ ಸಹಜಖಾನ್ ತಲೆಮರೆಸಿಕೊಂಡಿದ್ದಾನೆ. ಪಶ್ಚಿಮ ಬಂಗಾಳದ ಗೃಹ ಸಚಿವರೂ ಆಗಿರುವ ಮಮತಾ ಬ್ಯಾನರ್ಜಿ ಅವರ ಆಶ್ರಯವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಳವಿಯಾ ಎಕ್ಸ್ ನಲ್ಲಿ ಬರೆದುಕೊಂಡಿದ್ದರು.
ಸಂದೇಶ್ ಖಾಲಿಯ ಡಾನ್ ಎಂದು ಹೇಳಿಕೊಂಡಿದ್ದ ಸಹಜಖಾನ್ ತಲೆಮರೆಸಿಕೊಂಡಿದ್ದಾನೆ. ಪಶ್ಚಿಮ ಬಂಗಾಳದ ಗೃಹ ಸಚಿವರೂ ಆಗಿರುವ ಮಮತಾ ಬ್ಯಾನರ್ಜಿ ಅವರ ಆಶ್ರಯವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಳವಿಯಾ ಎಕ್ಸ್ ನಲ್ಲಿ ಬರೆದುಕೊಂಡಿದ್ದರು.
ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಳವಿಯಾ ವಿರುದ್ಧ ದೂರು ದಾಖಲಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇವೆ’ ಎಂದು ರಾಜ್ಯ ಸಚಿವರೂ ಆಗಿರುವ ಭಟ್ಟಾಚಾರ್ಯ ಸುದ್ದಿಗಾರರಿಗೆ ತಿಳಿಸಿದರು.
ಈ ಮಧ್ಯೆ ಸತ್ಯವನ್ನು ಅಡಗಿಸಲು ಪೊಲೀಸರನ್ನು ಬಳಸಿಕೊಳ್ಳಲು ಟಿಎಂಸಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಟೀಕಿಸಿದೆ. "ಅಮಿತ್ ಮಾಳವಿಯಾ ಹೇಳಿದ್ದೆಲ್ಲವೂ ಸಂಪೂರ್ಣ ಸತ್ಯ. ಟಿಎಂಸಿ ಸರ್ಕಾರವೇ ಕ್ರಿಮಿನಲ್‌ಗಳನ್ನು ರಕ್ಷಿಸುತ್ತಿದೆ ಮತ್ತು ಈ ಪ್ರವೃತ್ತಿಯು ರಾಜ್ಯದಲ್ಲಿ ಕಾನೂನುಬಾಹಿರತೆಗೆ ಕಾರಣವಾಗಿದೆ" ಎಂದು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಹೇಳಿದ್ದಾರೆ.
Advertisement