ಮಗನನ್ನು ಕೊಂದು ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಮಹಿಳಾ ಸಿಇಒಗೆ ಆರು ದಿನಗಳ ಪೊಲೀಸ್ ಕಸ್ಟಡಿ, ಗೋವಾ ಕೋರ್ಟ್ ಆದೇಶ

ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ನೆರೆಯ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ ಆರೋಪಿ ಸ್ಟಾರ್ಟ್‌ಅಪ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (ಸಿಇಒ) ಗೋವಾದ ನ್ಯಾಯಾಲಯ ಮಂಗಳವಾರ ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಮಹಿಳಾ ಸಿಇಒ ಸೇಠ್
ಮಹಿಳಾ ಸಿಇಒ ಸೇಠ್

ಪಣಜಿ: ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ನೆರೆಯ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ ಆರೋಪಿ ಸ್ಟಾರ್ಟ್‌ಅಪ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (ಸಿಇಒ) ಗೋವಾದ ನ್ಯಾಯಾಲಯ ಮಂಗಳವಾರ ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಸೋಮವಾರ ರಾತ್ರಿ ಆರೋಪಿ ಚಿತ್ರದುರ್ಗ ಮೂಲದ ಸುಚನಾ ಸೇಠ್ (39) ಅವರನ್ನು ಗೋವಾ ಪೊಲೀಸರು ಬಂಧಿಸಿದ್ದರು. ಮಂಗಳವಾರ ಮಧ್ಯಾಹ್ನ ಆಕೆಯನ್ನು ಗೋವಾಕ್ಕೆ ಕರೆತಂದು, ಮಾಪುಸಾ ಪಟ್ಟಣದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆ ಜನವರಿ 6 ರಂದು ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸರ್ವೀಸ್ ಅಪಾರ್ಟ್ ಮೆಂಟ್ ನಿಂದ ತನ್ನ ಮಗನೊಂದಿಗೆ ಚೆಕ್ ಇನ್ ಮಾಡುವುದಾಗಿ ಹೇಳಿದ್ದಳು. ಆದರೆ, ಎರಡು ದಿನ ಅಲ್ಲಿಯೇ ಇದ್ದು, ಸೋಮವಾರ ಟ್ಯಾಕ್ಸಿಯಲ್ಲಿ ಬೆಂಗಳೂರಿಗೆ ತೆರಳಿದ್ದಳು. ಬಳಿಕ ಅಪಾರ್ಟ್‌ಮೆಂಟ್‌ನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆಕೆ ಸ್ಥಳದಿಂದ ತೆರಳಿದಾಗ ಮಗ ಕಾಣಲಿಲ್ಲ ಎಂದು ಹೇಳಿದ್ದಾರೆ. ಚಿತ್ರದುರ್ಗ ಪೊಲೀಸರು ನಂತರ ಮಹಿಳೆಯ ಬ್ಯಾಗ್  ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ  ಸೇಠ್ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) 201 (ಸಾಕ್ಷ್ಯ ನಾಶ) ಮತ್ತು ಗೋವಾ ಮಕ್ಕಳ ಕಾಯ್ದೆಯಡಿಯಲ್ಲಿ ಗೋವಾದ ಕ್ಯಾಲಂಗುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಸ್ಟಾರ್ಟ್-ಅಪ್ ಮೈಂಡ್‌ಫುಲ್ ಎಐ ಲ್ಯಾಬ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸೇಠ್ 2021 ರ ಎಐ ಎಥಿಕ್ಸ್‌ನಲ್ಲಿ ಅಗ್ರ 100 ಬ್ರಿಲಿಯಂಟ್ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ ಎಂದು ಆಕೆಯ ಲಿಂಕ್ಡ್‌ಇನ್ ಪುಟಗಳಲ್ಲಿ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com