ರಾಮಮಂದಿರ ಉದ್ಘಾಟನೆ ದಿನ ಉತ್ತರ ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ, ಮದ್ಯದಂಗಡಿ ಬಂದ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ...
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಿದ್ದಾರೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ದಿನದಂದು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಯೋಗಿ ಅದಿತ್ಯನಾಥ್ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಒಂದು ರಾಷ್ಟ್ರೀಯ ಉತ್ಸವ ಆಗಿದೆ. ಶತಮಾನಗಳ ಕಾಯುವಿಕೆಯ ನಂತರ ಈ ಶುಭ ಗಳಿಗೆ ಬಂದಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳನ್ನು ದಿವ್ಯಸ್ವರೂಪದಲ್ಲಿ ಅಲಂಕರಿಸಲಾಗುವುದು. ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 22 ರಂದು ರಜೆ ಘೋಷಿಸಲು ಸೂಚನೆ ನೀಡಿದ್ದೇನೆ. ಬನ್ನಿ ಎಲ್ಲರೂ ಒಟ್ಟಾಗಿ ರಾಮೋತ್ಸವವನ್ನು ಆಚರಿಸೋಣ ಎಂದು ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com