
ನವದೆಹಲಿ: ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 819ಕ್ಕೆ ಏರಿಕೆಯಾಗಿದೆ.
ಮುಂಬೈನಲ್ಲಿ 19 ಮಂದಿಗೆ ಜೆಎನ್.1 ಉಪ-ವೇರಿಯಂಟ್ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಇದರೊಂದಿಗೆ ದೇಶದ 12 ರಾಜ್ಯಗಳಲ್ಲಿ 819 ಜೆಎನ್.1 ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ 250 ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 199, ಕೇರಳದಲ್ಲಿ 148, ಗೋವಾದಲ್ಲಿ 49, ಗುಜರಾತ್‌ನಿಂದ 36, ಆಂಧ್ರಪ್ರದೇಶ ಮತ್ತು ರಾಜಸ್ಥಾನದಿಂದ ತಲಾ 30, ತಮಿಳುನಾಡು ಮತ್ತು ತೆಲಂಗಾಣದಿಂದ ತಲಾ 26, ದೆಹಲಿಯಲ್ಲಿ 21, ಒಡಿಶಾದಲ್ಲಿ ಮೂರು ಮತ್ತು ಹರಿಯಾಣದಲ್ಲಿ ಒಂದು ಪ್ರಕರಣ ವರದಿಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತು JN.1 ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ತಕ್ಷಣಕ್ಕೆ ಆತಂಕ ಪಡುವ ಅಗತ್ಯ ಇಲ್ಲ. ಸೋಂಕಿತರಲ್ಲಿ ಹೆಚ್ಚಿನವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದು ಸೌಮ್ಯ ಅನಾರೋಗ್ಯವನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement