ಹೈದರಾಬಾದ್‌: ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು, 6 ಮಂದಿಗೆ ಗಾಯ

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ಹೈದರಾಬಾದ್ ಡೆಕ್ಕನ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಚೆನ್ನೈ-ಹೈದರಾಬಾದ್ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ...
ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು
ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು

ಹೈದರಾಬಾದ್‌: ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ಹೈದರಾಬಾದ್ ಡೆಕ್ಕನ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಚೆನ್ನೈ-ಹೈದರಾಬಾದ್ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ರೈಲ್ವೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ಡೆಕ್ಕನ್ ರೈಲು ನಿಲ್ದಾಣವು ಈ ರೈಲಿನ ಅಂತಿಮ ತಾಣವಾಗಿದೆ.

ಚೆನ್ನೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಚಾರ್ಮಿನಾರ್ ಎಕ್ಸ್‌ಪ್ರೆಸ್ ಅಪಘಾತಕ್ಕೀಡಾಗಿದ್ದು, ಲೊಕೊ ಪೈಲಟ್ ಡೆಡ್-ಎಂಡ್ ಲೈನ್‌ನತ್ತ ಗಮನ ಹರಿಸದ ಕಾರಣ ರೈಲಿನ ಮೂರು ಬೋಗಿಗಳು, ಎಸ್ 2, ಎಸ್ 3 ಮತ್ತು ಎಸ್ 6 ಬೋಗಿಗಳು ಹಳಿತಪ್ಪಿದವು ಎಂದು ದಕ್ಷಿಣ ಮಧ್ಯ ರೈಲ್ವೆ(ಎಸ್‌ಸಿಆರ್) ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್‌ಸಿಆರ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಂಗಳವಾರ ಸಂಜೆ ಚೆನ್ನೈನಿಂದ ಹೊರಟ ರೈಲು ಇಂದು ಬೆಳಗ್ಗೆ ಹೈದರಾಬಾದ್ ತಲುಪಿತ್ತು. ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com