ಶಿಂಧೆ ಬಣ 'ನಿಜವಾದ ಶಿವಸೇನೆ': ಮಹಾರಾಷ್ಟ್ರ ಸ್ಪೀಕರ್ ತೀರ್ಪು ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋಗಲು ಉದ್ಧವ್ ಸೇನೆ ನಿರ್ಧಾರ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ...
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ನಾಯಕ ಸಂಜಯ್ ರಾವತ್ ಅವರು ಬುಧವಾರ ಹೇಳಿದ್ದಾರೆ.

ಶಿವಸೇನಾ ಶಾಸಕ ಅನರ್ಹತೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಇಂದು ಆದೇಶ ಪ್ರಕಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಈ ಆದೇಶ "ಪಿತೂರಿ" ಎಂದು ಟೀಕಿಸಿದ್ದು, ಇದು ಅಪ್ಪಟ ಮರಾಠಿಗರಿಗೆ ಕರಾಳ ದಿನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷಕ್ಕೆ ಈ ರೀತಿ ಮಾಡಿರುವುದು ಅಪ್ಪಟ ಮರಾಠಿಗರಿಗೆ ಮತ್ತು ಮಹಾರಾಷ್ಟ್ರದ ಬೆನ್ನಿಗೆ ಚೂರಿ ಹಾಕುವಂಥ ಕ್ರೂರ ಕೆಲಸ ಎಂದಿದ್ದಾರೆ.

"ದಿಲ್ಲಿಯಿಂದ ಅವರಿಗೆ(ಸ್ಪೀಕರ್ ಗೆ) ಆದೇಶ ಬಂದಿದೆ. ನಾವು ಅದನ್ನು ಒಪ್ಪುವುದಿಲ್ಲ. ಈ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನದ ಪ್ರಕಾರ ಇಲ್ಲ. ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯನ್ನು ಮುಗಿಸುವುದು ಬಿಜೆಪಿಯ ಕನಸಾಗಿತ್ತು. ಆದರೆ ಶಿವಸೇನೆ ಮುಗಿಸಲು ಸಾಧ್ಯವಿಲ್ಲ. ಖಂಡಿತವಾಗಿಯೂ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ... ನಮ್ಮ ಹೋರಾಟ ನ್ಯಾಯಾಲಯಗಳಲ್ಲಿ ಮುಂದುವರಿಯುತ್ತದೆ" ಎಂದು ರಾವತ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com